Header Ads
Header Ads
Breaking News

ಲೋಕಸಭಾ ಚುನಾವಣೆಯ ಹಿನ್ನೆಲೆ,ವಿನಯ ಕುಮಾರ್ ಸೊರಕೆಗೆ ಅವಕಾಶ ನೀಡಬಾರದು:ದ.ಕ. ಜಿಲ್ಲಾ ಮುಸ್ಲಿಂ ಒಕ್ಕೂಟದ ಆಗ್ರಹ

ಮುಂದಿನ ಲೋಕಸಭಾ ಚುನಾವಣೆಗೆ ದ.ಕ. ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ವಿನಯ ಕುಮಾರ್ ಸೊರಕೆ ಆಕಾಂಕ್ಷಿಯಾಗಿದ್ದು, ಅವರಿಗೆ ಕಾಂಗ್ರೆಸ್ ಪಕ್ಷ ಅವಕಾಶ ನೀಡಬಾರದು ಎಂದು ದ.ಕ. ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೆ.ಅಶ್ರಫ್ ತಿಳಿಸಿದ್ದಾರೆ.

ಅವರು ಮಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿನಯ ಕುಮಾರ್ ಸೊರಕೆ ಬದಲು ಯಾವುದೇ ವ್ಯಕ್ತಿಯನ್ನು ನಿಲ್ಲಿಸಿದ್ದಲ್ಲಿ ತಮ್ಮಿಂದ ವಿರೋಧವಿಲ್ಲ. ಒಂದು ವೇಳೆ ಸೊರಕೆಗೆ ಟಿಕೆಟ್ ನೀಡಿದ್ದೇ ಆದಲ್ಲಿ ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ತೀವ್ರ ಸ್ವರೂಪದ ಹೋರಾಟ ಮಾಡಲಾಗುವುದು. ಜೊತೆಗೆ ಸೊರಕೆ ವಿರುದ್ಧ ಪರ್ಯಾಯ ಅಭ್ಯರ್ಥಿಯನ್ನು ನಿಲ್ಲಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಶಕ್ತಿನಗರ ವಾರ್ಡ್‌ನಲ್ಲಿ ಮಸ್ಲಿಮೇತರರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಮಾಜಿ ಮೇಯರ್ ಅಬ್ದುಲ್ ಅಝೀಝ್ ಅವರನ್ನು ಮೂರು ಬಾರಿ ಬಹುಮತದಿಂದ ಆರಿಸಿದ್ದಾರೆ. ಯಾವುದೇ ಕಾರಣಕ್ಕೂ ದ.ಕ. ಲೋಕಸಭಾ ಕ್ಷೇತ್ರದಿಂದ ವಿನಯ ಕುಮಾರ್ ಸೊರಕೆಗೆ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಅವರು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಸಿ.ಎಂ.ಮುಸ್ತಫಾ, ಮುಹಮ್ಮದ್ ಹನೀಫ್ ಯು., ಹಿದಾಯತ್ ಮಾರಿಪಳ್ಳ, ಸಿದ್ದೀಕ್ ತಲಪಾಡಿ, ಮೊಯ್ದಿನ್ ಮೋನು, ಅಬ್ದುಲ್ ಜಲೀಲ್ ಅದ್ದಾಕ, ಮುಹಮ್ಮದ್ ಅಶ್ರಫ್ ಬದ್ರಿಯಾ, ಕೆ.ಎಚ್. ಅಬೂಬಕರ್ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *