Header Ads
Header Ads
Breaking News

ಲೋಕಸಭಾ ಚುನಾವಣೆ ಹಿನ್ನೆಲೆ:ಮಾರ್ಚ್ 18ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮ

ಕರ್ನಾಟಕ ಸೇರಿದಂತೆ ಎಲ್ಲ ರಾಜ್ಯಗಳ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿಯು ಮಾರ್ಚ್ 18ಕ್ಕೆ ಅಂತಿಮಗೊಳಿಸಲಿದೆ. ಅಭ್ಯರ್ಥಿ ಆಯ್ಕೆ ವಿಷಯವಾಗಿ ಸರಣಿ ಸಭೆಗಳನ್ನು ಬಿಜೆಪಿ ನಡೆಸುತ್ತಿದ್ದು, ಎಲ್ಲ ರಾಜ್ಯಗಳ ಬಿಜೆಪಿ ಮುಖಂಡರು ಕೆಲವು ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಅವರೊಂದಿಗೆ ಆಕಾಂಕ್ಷಿಗಳು ಸಹ ಕೊನೆ ಕ್ಷಣದ ಲಾಭಿಯಲ್ಲಿ ನಿರತರಾಗಿದ್ದಾರೆ.

ಬಿಜೆಪಿಯ ಚುನಾವಣಾ ಸಮಿತಿಯು ಮಾರ್ಚ್ 18 ಕ್ಕೆ ಸಭೆ ಸೇರಲಿದ್ದು, ಅಂದು ಅಂತಿಮ ಸುತ್ತಿನ ಮಾತುಕತೆ ನಡೆಸಿ ಅಂದೇ ಎಲ್ಲ ರಾಜ್ಯದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಿದೆ. ಮಾರ್ಚ್ 19 ರಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗುತ್ತಿರುವ ಕಾರಣ ಬಿಜೆಪಿಯು ಅಭ್ಯರ್ಥಿ ಆಯ್ಕೆ ಕಾರ್ಯಕ್ಕೆ ವೇಗ ನೀಡಿದೆ. ಯಡಿಯೂರಪ್ಪ ಅವರು ಈಗಾಗಲೇ ಎರಡು ಸುತ್ತಿನ ಮಾತುಕತೆಯನ್ನು ಬಿಜೆಪಿ ಹೈಕಮಾಂಡ್ ಜೊತೆ ಮಾಡಿದ್ದಾರೆ.ರಾಜ್ಯದ ಅಭ್ಯರ್ಥಿಗಳ ಪಟ್ಟಿಯು ಇನ್ನೆರಡು ದಿನಗಳಲ್ಲಿ ಅಂತಿಮವಾಗಲಿದೆ. ಆದರೆ ಅಧಿಕೃತವಾಗಿ ಮಾರ್ಚ್ 18ರಂದೇ ಪಟ್ಟಿ ಘೋಷಣೆ ಆಗಲಿದೆ. ಯಡಿಯೂರಪ್ಪ ಅವರು ತಮ್ಮ ಪಟ್ಟಿಯನ್ನು ಬಿಜೆಪಿಗೆ ನೀಡಿದ್ದಾರೆ. ಆರ್‌ಎಸ್‌ಎಸ್ ಸಹ ತನ್ನ ಪಟ್ಟಿಯನ್ನು ಬಿಜೆಪಿಗೆ ನೀಡಿದೆ ಎನ್ನಲಾಗಿದೆ.

ರಾಜ್ಯದಲ್ಲಿ ಈ ಬಾರಿ ಕೆಲವು ಹಾಲಿ ಸಂಸದರು ಅವಕಾಶ ಕಳೆದುಕೊಳ್ಳಲಿದ್ದಾರೆ ಎನ್ನಲಾಗಿದ್ದು, ಕೆಲವರಿಗೆ ಕ್ಷೇತ್ರ ಬದಲಾವಣೆ ಸಹ ಮಾಡಲಾಗುತ್ತದೆ. ಕೆಲವು ಹೊಸ ಮುಖಗಳಿಗೆ ಅವಕಾಶ ನೀಡಲಾಗುತ್ತಿದೆ. ಆದರೆ ಯಾವುದೇ ಶಾಸಕರಿಗೆ ಲೋಕಸಭೆ ಚುನಾವಣೆ ಟಿಕೆಟ್ ನೀಡಲಾಗುವುದಿಲ್ಲ ಎಂದು ಖಡ್ಡಾಯವಾಗಿ ಬಿಜೆಪಿ ಹೈಕಮಾಂಡ್ ಸೂಚಿಸಿದೆ

Related posts

Leave a Reply

Your email address will not be published. Required fields are marked *