Header Ads
Header Ads
Breaking News

ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ವೆಂಕಟಾಚಲ ನಿಧನ

ಲೋಕಾಯುಕ್ತ ಸಂಸ್ಥೆಯ ಅಧಿಕಾರವನ್ನು ಜನಪರವಾಗಿ ಬಳಸಿ, `ಲೋಕಾಯುಕ್ತರು ಹೀಗೂ ಕೆಲಸ ಮಾಡಬಹುದು’ ಎಂದು ಸಾಧಿಸಿ ತೋರಿಸಿದ ನ್ಯಾಯಮೂರ್ತಿ ಎನ್.ವೆಂಕಟಾಚಲ (90) ಅವರು ಇಂದು ನಿಧನರಾಗಿದ್ದಾರೆ. ಬಳ್ಳಾರಿ ರಸ್ತೆಯ ಕಾವೇರಿ ಚಿತ್ರಮಂದಿರ ಹಿಂಭಾಗದ ಲಕ್ಷ್ಮಿ ದೇವಾಲಯದ ಬಳಿಯ ತಮ್ಮ ನಿವಾಸದಲ್ಲಿದ್ದ ಅವರಿಗೆ ಬೆಳಿಗ್ಗೆ 5.45ಕ್ಕೆ ಎದೆನೋವು ಕಾಣಿಸಿಕೊಂಡಿತು. ಕೂಡಲೇ ಅವರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದರು. ಒಬ್ಬ ಪುತ್ರ ಮತ್ತು ಪುತ್ರಿ ಸದ್ಯ ಅಮೆರಿಕದಲ್ಲಿದ್ದು ಅವರು ಬಂದ ನಂತರ ಗುರುವಾರ (ಅ.31) ಅಂತ್ಯಕ್ರಿಯೆ ನಡೆಯಲಿದೆ’ ಎಂದು ಕುಟುಂಬದ ಮೂಲಗಳು ತಿಳಿಸಿವೆ. ನ್ಯಾಯಮೂರ್ತಿ ವೆಂಕಟಾಚಲ ಅವರು ಲೋಕಾಯುಕ್ತರಾಗಿ ನೇಮಕಗೊಂಡ ನಂತರವೇ ಸರ್ಕಾರಿ ಅಧಿಕಾರಿಗಳಲ್ಲಿ ಲೋಕಾಯುಕ್ತ ಭಯವನ್ನು ಉಂಟು ಮಾಡಿತು. ಲೋಕಾಯುಕ್ತ ಸಂಸ್ಥೆಯಿಂದ ತಮ್ಮ ನೋವುಗಳಿಗೆ ಪರಿಹಾರ ಸಿಗುತ್ತದೆ ಎಂಬ ಭಾವನೆ ಜನರಲ್ಲಿ ಬಂದಿತ್ತು. ಇನ್ನು ವೆಂಕಟಾಚಲ ಅವರ ನಿಧನಕ್ಕೆ ಅನೇಕ ರಾಜಕೀಯ, ಧಾರ್ಮಿಕ ಗಣ್ಯರು ಕಂಬನಿ ಮಿಡಿದಿದ್ದಾರೆ.

Related posts

Leave a Reply

Your email address will not be published. Required fields are marked *