Header Ads
Header Ads
Breaking News

ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ

ಕುಂದಾಪುರ: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಮುಂಗಾರು ಪತ್ರಿಕೆಯ ಸಂಪಾದಕ ದಿವಂಗತ ವಡ್ಡರ್ಸೆ ರಘುರಾಮ ಶೆಟ್ಟರ ಹೆಸರಿನಲ್ಲಿ ಕೊಡಮಾಡುವ ‘ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ ಕಾರ್ಯಕ್ರಮವು ರಘುರಾಮ ಶೆಟ್ಟರ ವಡ್ಡರ್ಸೆಯ ಮನೆಯಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯ ಅತಿಥಿಗಳು ಜತೆಯಾಗಿ ಆಮಂತ್ರಣ ಬಿಡುಗಡೆಗೊಳಿಸಿದರು. ಈ ಸಂದರ್ಭ ವಡ್ಡರ್ಸೆ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೊತ್ತಾಡಿ ಉದಯ ಕುಮಾರ್ ಶೆಟ್ಟಿ, ಸಾಮಾಜಿಕ ಚಿಂತಕ ಉದಯ ಶೆಟ್ಟಿ ಪಡುಕರೆ, ಮಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸತೀಶ್ ಕುಂದರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *