Header Ads
Breaking News

ವರ್ಷಗಳಿಂದ ನಿಲ್ಲಿಸಿದ್ದ ಟಿಪ್ಪರಿಗೆ ರಿಕ್ಷಾ ಢಿಕ್ಕಿ : ರಿಕ್ಷಾ ಚಾಲಕ ಸಾವು, ಮೂವರಿಗೆ ಗಾಯ

ನಿಲ್ಲಿಸಿದ್ದ ಟಿಪ್ಪರ್‍ಗೆ ರಿಕ್ಷಾವೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಸಾವನ್ನಪ್ಪಿದ್ದು ಉಳಿದ ಮೂವರು ಗಾಯಗೊಂಡ ಘಟನೆ ಮರೋಳಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಘಟನೆಯಲ್ಲಿ ಸಾವನ್ನಪ್ಪಿದ ರಿಕ್ಷಾ ಚಾಲಕನನ್ನು ವಳಚ್ಚಿಲ್ ನಿವಾಸಿ ಸಲೀಂ(40) ಎನ್ನಲಾಗಿದ್ದು ಉಳಿದ ಮೂವರು ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲ್ಪೆಯಿಂದ ಮೀನು ತುಂಬಿಕೊಂಡು ರಿಕ್ಷಾದಲ್ಲಿ ಬರುತ್ತಿದ್ದ ಸಂದರ್ಭ ಮರೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವು ವರ್ಷಗಳಿಂದ ನಿಂತಿದ್ದ ಟಿಪ್ಪರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದು ತಕ್ಷಣ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿದರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Related posts

Leave a Reply

Your email address will not be published. Required fields are marked *