Header Ads
Header Ads
Header Ads
Breaking News

ವಲಯ ಮಟ್ಟದ ಮಕ್ಕಳ ದಿನಾಚರಣೆ ಅಂಗನವಾಡಿ ಪುಟಾಣಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ವಿಟ್ಲದ ಅಳಿಕೆಯಲ್ಲಿ ಆಯೋಜನೆ

ವಿಟ್ಲದ ಅಳಿಕೆ ಗ್ರಾಮ ಪಂಚಾಯಿತಿ ಮತ್ತು ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆಶ್ರಯದಲ್ಲಿ ಅಳಿಕೆ ಗ್ರಾಮದ ೮ ಅಂಗನವಾಡಿ ಕೇಂದ್ರಗಳ ವಲಯ ಮಟ್ಟದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಮತ್ತು ಅಂಗನವಾಡಿ ಪುಟಾಣಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ವಲಯ ಮಟ್ಟದ ಮಕ್ಕಳ ದಿನಾಚರಣೆಯಲ್ಲಿ ಸುಮಾರು ೮ ಅಂಗನವಾಡಿಗಳ ಮಕ್ಕಳು ಭಾಗವಹಿಸಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು. ಅಳಿಕೆ ನೆಕ್ಕಿತಪುಣಿ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಆಡಳಿತಾಧಿಕಾರಿ ಯಂ ಯಶೋಧರ ಬಂಗೇರ ಅಧ್ಯಕ್ಷತೆ ವಹಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಸದಸ್ಯ ಎಂ. ಎಸ್. ಮಹಮ್ಮದ್ ಮಹಿಳೆಯರಿಗೆ ಅವಕಾಶಗಳನ್ನು ಒದಗಿಸಿದವರಿಗೆ ನಾವು ಪ್ರೋತ್ಸಾಹ ನೀಡುವ ಕಾರ್ಯವಾಗಬೇಕು. ಸ್ವಾಭಿಮಾನದ ಬದುಕು ರೂಪಿಸುವ ನಿಟ್ಟಿನಲ್ಲಿ ಇಂದಿರಾಗಾಂಧಿ ಅವರ ಕಲ್ಪನೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪಾತ್ರ ಮಹತ್ವದ್ದು. ಅಳಿಕೆ ಗ್ರಾಮದ ಎಲ್ಲ ಅಂಗನವಾಡಿ ಮಕ್ಕಳ ದಿನಾಚರಣೆ ಜತೆಯಾಗಿ ಆಯೋಜಿಸಿರುವುದು ಶ್ಲಾಘನೀಯ ಎಂದು ಹೇಳಿದರು.

ಅಳಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು, ವಿಟ್ಲ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಧಾ ಜೋಶಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಸುಂದರ ಪೂಜಾರಿ, ಅಳಿಕೆ ಆರೋಗ್ಯ ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಡಾ. ಜಯಪ್ರಕಾಶ್, ಅಳಿಕೆ ಶ್ರೀ ಸತ್ಯ ಸಾಯಿ ಲೋಕಸೇವಾ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಈಶ್ವರ ನಾಯ್ಕ, ಊಟೋಪಚಾರದ ದಾನಿ ರಾಮ ಪೂಜಾರಿ ಮುಳಿಯ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸೆಲ್ವೀನಾ ಡಿ ಸೋಜ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಿನ್ನಪ್ಪ ಗೌಡ, ಕಾರ್ಯದರ್ಶಿ ಹೊನ್ನಪ್ಪ ಗೌಡ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply