Header Ads
Header Ads
Header Ads
Breaking News

ವಲಯ ಮಟ್ಟದ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಚಾಲನೆ ಶಿಕ್ಷಣದೊಂದಿಗೆ ಕ್ರೀಡೆಗೂ ಹೆಚ್ಚಿನ ಪ್ರಾಶಸ್ತ್ಯ ನೀಡಿ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಭಾರತಿ ಶೆಟ್ಟಿ ಹೇಳಿಕೆ

ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾ ಕೂಟಕ್ಕೆ ಚಾಲನೆ

ವಿದ್ಯಾರ್ಥಿ ಮಾನಸಿಕ ಹಾಗೂ ದೈಹಿಕವಾಗಿ ಬೆಳೆಯಬೇಕಾದರೆ ಶಿಕ್ಷಣದೊಂದಿಗೆ ಕ್ರೀಡೆಗೂ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಭಾರತಿ ಶೆಟ್ಟಿ ಹೇಳಿದರು.
ಅವರು ಮಂಗಳವಾರ ಕುಂದಾಪುರ ಗಾಂಧಿ ಮೈದಾನದಲ್ಲಿ ಉಡುಪಿ ಜಿ.ಪಂ. ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಽಕಾರಿಗಳ ಕಚೇರಿ ಕುಂದಾಪುರ ವಲಯ, ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮತ್ತು ಎಚ್.ಎಂ.ಎಂ. ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ಕುಂದಾಪುರ ಇವರ ಆಶ್ರಯದಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ಉದ್ಘಾಟಿಸಿ , ಧ್ವಜಾರೋಹಣ ಗೈದು ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಕುಂದಾಪುರ ಪುರಸಭೆಯ ಅಧ್ಯಕ್ಷೆ ವಸಂತಿ ಸಾರಂಗ, ತಾಲೂಕು ಯುವಜನ ಸೇವಾ ಮತ್ತು ಕ್ರೀಡಾಽಕಾರಿ ಕುಸುಮಾಕರ ಶೆಟ್ಟಿ, ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಽಕಾರಿ ಅಶೋಕ್ ಕಾಮತ್ , ಎಚ್.ಎಂ.ಎಂ. ಹಾಗೂ ವಿಕೆ‌ಆರ್ ಪ್ರೌಢಶಾಲೆಯ ಪ್ರಾಂಶುಪಾಲೆ ಚಿಂತನಾ ರಾಜೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸದಾರಾಮ ಶೆಟ್ಟಿ, ಸಿ‌ಇ‌ಎಸ್‌ಎಸ್‌ಎ‌ಎ ಕುಂದಾಪುರದ ಅಧ್ಯಕ್ಷ ಸಚಿನ್ ನಕ್ಕತ್ತಾಯ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಽಕಾರಿ ದತ್ತಾತ್ರೇಯ ನಾಯ್ಕ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸತ್ಯಾನಂದ ಸಾಲಿನ್ಸ್ , ಎಚ್.ಎಂ.ಎಂ. ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಜಗದೀಶ್ ಆಚಾರ್ ಸಾಸ್ತಾನ, ಬಿ.ಬಿ.ಹೆಗ್ಡೆ ಕಾಲೇಜಿನ ಪ್ರಾಂಶುಪಾಲ ಪ್ರೊ|ದೋಮಾಚಂದ್ರಶೇಖರ್, ಆರ್.ಎನ್.ಶೆಟ್ಟಿ ಪ.ಪೂ.ಕಾಲೇಜಿನ ಪ್ರಾಂಶುಪಾಲ ನವೀನ್ ಶೆಟ್ಟಿ ಉಪಸ್ಥಿತರಿದ್ದರು.

ವಿಕೆ‌ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಅನಿತಾ ಆಲಿಸ್ ಡಿ ಸೋಜಾ ಸ್ವಾಗತಿಸಿದರು. ಅಧ್ಯಾಪಕಿ ಸ್ವಪ್ನಾ ಸತೀಶ್, ದೈಹಿಕ ಶಿಕ್ಷಣ ಶಿಕ್ಷಕ ಪ್ರಕಾಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಜಗದೀಶ ವಂದಿಸಿದರು.

Related posts

Leave a Reply