Header Ads
Header Ads
Breaking News

ವಾಜಪೇಯಿ ಆರೋಗ್ಯ ಮತ್ತಷ್ಟು ಕ್ಷೀಣ. ಏಮ್ಸ್ ಆಸ್ಪತ್ರೆಗೆ ಅಡ್ವಾಣಿ, ಮೋದಿ, ಶಾ ದೌಡು.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಮತ್ತಷ್ಟು ಕ್ಷೀಣವಾಗಿದ್ದು, ಅವರ ದೇಹ ಚಿಕಿತ್ಸೆ ಸ್ಪಂದಿಸುತ್ತಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.ಕಳೆದ ಎರಡು ತಿಂಗಳಿನಿಂದ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ವಾಜಪೇಯಿ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆಯಲ್ಲಿಡಲಾಗಿದೆ ಎಂದು ಈಗಾಗಲೇ ಏಮ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.
ಕಳೆದ 24 ಗಂಟೆಯಿಂದ ವಾಜಪೇಯಿ ಆರೋಗ್ಯ ಬಿಗಡಾಯಿಸಿದೆ. ಜೀವರಕ್ಷಕ ಸಾಧನಗಳನ್ನು ಅಳವಡಿಸಲಾಗಿದೆ ಎಂದು ವೈದ್ಯರು ಖಚಿತಪಡಿಸಿದ್ದಾರೆ. ಕಿಡ್ನಿ ಹಾಗೂ ಮೂತ್ರಕೋಶದ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಜೂ.11ರಂದು ವಾಜಪೇಯಿ ಅವರನ್ನು ಏಮ್ಸ್?ಗೆ ಸೇರಿಸಲಾಗಿದೆ. 93 ವರ್ಷದ ವಾಜಪೇಯಿ 2009ರಲ್ಲಿ ಪಾರ್ಶ್ವವಾಯುಗೆ ತುತ್ತಾದ ಬಳಿಕ ಅವರ ಒಂದೇ ಕಿಡ್ನಿ ಕಾರ್ಯನಿರ್ವಹಿಸುತ್ತಿದೆ. ಇದೇ ಅವರ ಆರೋಗ್ಯ ಸಮಸ್ಯೆ ಹೆಚ್ಚಳಕ್ಕೆ ಕಾರಣವಾಗಿದೆ.ವಾಜಪೇಯಿ ಆರೋಗ್ಯ ಬಿಗಡಾಯಿಸಿರುವ ಹಿನ್ನಲೆಯಲ್ಲಿ ರಾಜಕೀಯ ಪ್ರಮುಖ ನಾಯಕರು ಆಸ್ಪತ್ರೆಗೆ ದೌಡಾಯಿಸುತ್ತಿದ್ದಾರೆ. ವಾಜಪೇಯಿ ಆರೋಗ್ಯ ಹದಗೆಟ್ಟಿರುವ ವಿಷಯ ತಿಳಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಸಂಜೆ ಏಮ್ಸ್‌ಗೆ ಭೇಟಿ ನೀಡಿ ವೈದ್ಯರ ಜತೆ50 ನಿಮಿಷ ಚರ್ಚಿಸಿದರು. ಅಲ್ಲದೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಗೃಹ ಸಚಿವರಾದ ರಾಜನಾಥ್ ಸಿಂಗ್, ಹಿರಿಯ ನಾಯಕ ಎಲ್.ಕೆ. ಅಡ್ವಾಣಿ, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಸಚಿವರಾದ ಪಿಯೂಷ್ ಗೋಯಲ್, ಹರ್ಷವರ್ಧನ್, ಸ್ಮೃತಿ ಇರಾನಿ, ಸುರೇಶ್ ಪ್ರಭು, ಅಶ್ವಿನಿಕುಮಾರ್ ಚೌಭೆ ಹಾಗೂ ಹಲವು ಬಿಜೆಪಿ ನಾಯಕರು ಏಮ್ಸ್‌ಗೆ ಭೇಟಿಕೊಟ್ಟಿದ್ದರು.

Related posts

Leave a Reply