Header Ads
Header Ads
Breaking News

ವಾರ್ಷಿಕೋತ್ಸವದ ಸಂಭ್ರಮದಲ್ಲಿ ನ್ಯೂ ಬಲಮೂರ್ತಿ ವ್ಯಾಯಾಮ ಶಾಲೆ

ಮಂಗಳೂರಿನ ಮೋರ್ಗನ್ಸ್‌ಗೇಟ್‌ನಲ್ಲಿರುವ ನ್ಯೂ ಬಲಮೂರ್ತಿ ವ್ಯಾಯಾಮ ಶಾಲೆಯು 2ನೇ ವಾರ್ಷಿಕೋತ್ಸವವನ್ನು ಹಮ್ಮಿಕೊಂಡಿದ್ದು, ಆ ಪ್ರಯುಕ್ತ ರಾಜ್ಯಮಟ್ಟದ ಸೀನಿಯರ್ ಮತ್ತು ಮಾಸ್ಟರ್‍ಸ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನ ಉದ್ಘಾಟನಾ ಸಮಾರಂಭ ನಡೆಯಿತು.ಮಂಗಳೂರಿನ ಮಂಗಳಾ ಸ್ಟೇಡಿಯಂ ಸಮೀಪದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿದಲ್ಲಿ ಎರಡು ದಿನಗಳ ರಾಜ್ಯಮಟ್ಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯನ್ನು ಶ್ರೀದೇವಿ ಎಜ್ಯುಕೇಶನ್ ಟ್ರಸ್ಟ್‌ನ ಚೇರ್‌ಮೆನ್ ಎ. ಸದಾನಂದ ಶೆಟ್ಟಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ಇವತ್ತು ನ್ಯೂ ಬಲಮೂರ್ತಿ ವ್ಯಾಯಾಮ ಶಾಲೆಯು25ನೇ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿರುವುದು ಸಂತಸದ ವಿಚಾರ. ಇದರ ಜೊತೆಗೆನೇ ರಾಜ್ಯಮಟ್ಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯನ್ನು ಹಮ್ಮಿಕೊಂಡಿದ್ದು, ಇದರಲ್ಲಿ ಸ್ಪರ್ಧಿಸಲಿರುವ ಎಲ್ಲಾ ಸ್ಪರ್ಧಿಗಳಿಗೆ ಶುಭ ಹಾರೈಸಿದರು.ಇದೇ ವೇಳೆ ಎ ಸದಾನಂದ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಪವರ್ ಲಿಫ್ಟಿಂಗ್ ಅಸೋಸಿಯೇಶನ್ ಕಾರ್ಯದರ್ಶಿ ಏಕಲವ್ಯ ಪ್ರಶಸ್ತಿ ಪುರಸ್ಕೃತ ಸತೀಶ್ ಕುಮಾರ್ ಕುದ್ರೋಳಿ, ಸ್ಪರ್ಧೇಯ ನಿರ್ದೇಶಕರಾದ ಕಾರ್ತಿಕ್ ರಾಜ್, ಮಾಜಿ ಕಾರ್ಪೋರೇಟರ್ ಭಾಸ್ಕರ್ ರಾವ್, ಕಾರ್ಪೊರೇಟರ್ ಪ್ರೇಮಾನಂದ ಶೆಟ್ಟಿ, ಒರ್ಗನೈಸಿಂಗ್ ಚೇರ್‌ಮೆನ್ ಹರೀಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply