Header Ads
Header Ads
Header Ads
Breaking News

ವಿಕಾಸ್ ಗ್ರೂಫ್ ಆಪ್ ಇನ್‌ಸ್ಟಿಟ್ಯೂಷನ್‌ನ ವಾರ್ಷಿಕ ಕ್ರೀಡೋತ್ಸವ ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ನಡೆದ ಸ್ಪರ್ಧೆ ರಮೇಶ್ ಹೆಚ್.ಎನ್.ರಿಂದ ಕ್ರೀಡಾ ಕೂಟ ಉದ್ಘಾಟನೆ

ಮಂಗಳೂರಿನ ಮೇರಿಹಿಲ್‌ನಲ್ಲಿರುವ ವಿಕಾಸ್ ಗ್ರೂಫ್ ಆಫ್ ಇನ್‌ಸ್ಟಿಟ್ಯೂಷನ್‌ನ ವಾರ್ಷಿಕ ಕ್ರೀಡೋತ್ಸವವು ಮಂಗಳಾ ಕ್ರೀಡಾಂಗಣದಲ್ಲಿ ಜರುಗಿತು.
ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ವಿಕಾಸ್ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಯಿತು. ಮಂಗಳೂರು ವಿಶ್ವ ವಿದ್ಯಾನಿಲಯದ ದೈಹಿಕ ಶಿಕ್ಷಕ ರಮೇಶ್ ಹೆಚ್.ಎನ್ ಧ್ವಜಾರೋಹಣ ನೆರವೇರಿಸಿದರು. ಅನಂತರ ವಿಕಾಸ್ ಎಜ್ಯುಕೇಶನ್ ಟ್ರಸ್ಟ್‌ನ ಚೇರ್‌ಮೆನ್ ಕೃಷ್ಣ ಜೆ. ಪಾಲೇಮಾರ್ ಬೆಲೂನು ಹಾರಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿದರು. ಇದೇ ವೇಳೆ ನೆರೆದಿದ್ದ ಗಣ್ಯರು ಪಥಸಂಚಲನದ ಗೌರವ ವಂದನೆ ಸ್ವೀಕರಿಸಿದರು.ಕ್ರೀಡಾ ಜ್ಯೋತಿ ಬೆಳಗಿಸಿ ಮಾತನಾಡಿದ ಮಂಗಳೂರು ವಿಶ್ವ ವಿದ್ಯಾನಿಲಯದ ದೈಹಿಕ ಶಿಕ್ಷಕ ರಮೇಶ್ ಹೆಚ್.ಎನ್. ಕ್ರೀಡಾ ಪ್ರತಿಭೆಗಳಿಗೆ ಇದೊಂದು ಉತ್ತಮ ಅವಕಾಶ ತಮ್ಮಲ್ಲಿರುವ ಪ್ರತಿಭೆಗಳನ್ನು ಕಾಲೇಜ್‌ನಲ್ಲೇ ತೋರ್ಪಡಿಸಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಗುರುತಿಸುವಂತರಾಗಿರಿ ಎಂದು ಹಾರೈಸಿದರು.

ಅನಂತರ ವಿಕಾಸ್ ಎಜ್ಯುಕೇಶನ್ ಟ್ರಸ್ಟ್‌ನ ಚೇರ್‌ಮೆನ್ ಕೃಷ್ಣ ಜೆ. ಪಾಲೇಮಾರ್ ಮಾತನಾಡಿ ವಿಕಾಸ್ ಕಾಲೇಜಿನ ವಿದ್ಯಾರ್ಥಿಗಳು ದೇಶ ಮಟ್ಟದಲ್ಲಿ ಕ್ರೀಡೆಯಲ್ಲಿ ಗುರುತಿಸುವ ಉದ್ದೇಶದಿಂದ ಮತ್ತು ಕ್ರೀಡೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕ್ರೀಡಾ ದಿನವನ್ನು ಆಚರಿಸಿದ್ದೇವೆ. ಪ್ರತಿಯೊಬ್ಬರು ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವ ಅವಕಾಶವನ್ನು ಕಲ್ಪಿಸಲಾಗಿದೆ ಎಂದ ಅವರು ಕ್ರೀಡಾ ಸ್ಪರ್ಧಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ವಿಕಾಸ್ ಪಿಯು ಕಾಲೇಜಿನ ಪ್ರಿನ್ಸಿಪಾಲ್ ಪ್ರೊ. ಟಿ. ರಾಜಾರಾಮ್ ರಾವ್, ಬಿಪಿಟಿ ಕಾಲೇಜಿನ ಪ್ರಿನ್ಸಿಪಾಲ್ ಡಾ. ಕೆ. ರಮೇಶ್, ಡಾ. ಡಿ. ಶ್ರೀಪತಿ ರಾವ್, ಸೂರಜ್ ಕಲ್ಯ, ವಿಕಾಸ್ ಕಾಲೇಜಿನ ದೈಹಿಕ ಶಿಕ್ಷಕ ರಮೇಶ್ ಪೂಜಾರಿ ಉಪಸ್ಥಿತರಿದ್ದರು.
ಈ ಸಂದರ್ಭ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು ನಡೆದವು.
ವರದಿ: ಶರತ್

Related posts

Leave a Reply