Header Ads
Header Ads
Breaking News

ವಿಕಾಸ್ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವ:ಮನರಂಜಿಸಿದ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ.

ಮಂಗಳೂರಿನ ಮೇರಿಹಿಲ್‌ನಲ್ಲಿರುವ ವಿಕಾಸ್ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ಇನ್ನು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಜನಮನಸೂರೆಗೊಂಡಿತು.ವಿಕಾಸ್ ಕಾಲೇಜಿನ ಕ್ಯಾಂಪಸ್‌ನಲ್ಲಿ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ|ವಿನಯ ಹೆಗ್ಡೆ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಜ್ಞಾನ ಸಂಪಾದನೆ ಮಾನವನ ಮೂಲಭೂತ ಹಕ್ಕು. ಪ್ರಾಮಾಣಿಕತೆ, ಪರಿಶ್ರಮ ಹಾಗೂ ನಿರಂತರ ಪ್ರಯತ್ನದಿಂದ ವೃತ್ತಿಯಲ್ಲಿ ಯಶಸ್ಸನ್ನು ಗಳಿಸಲು ಸಾಧ್ಯ. ವೃತ್ತಿಯನ್ನು ಪ್ರೀತಿಯಿಂದ ಸ್ವೀಕರಿಸಿ ಸಮಾಜಕ್ಕೆ ಸೇವೆ ಸಲ್ಲಿಸಿದಾಗ ಜೀವನ ಸಾರ್ಥಕವಾಗುತ್ತದೆ ಎಂದರು.

ಇನ್ನೋರ್ವ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕರ್ನಾಟಕ ರಾಜ್ಯಸರ್ಕಾರದ ಮಾಜಿ ಮಂತ್ರಿಗಳಾದ ಜಯಪ್ರಕಾಶ್ ಹೆಗ್ಡೆ ಮಾತನಾಡುತ್ತ, ವಿದ್ಯಾರ್ಥಿಗಳು ತಮ್ಮ ಭವಿಷ್ಯ ನಿರ್ಮಾಣಕ್ಕೆ ಕೇವಲ ಶಿಕ್ಷಣವನ್ನು ಮಾತ್ರ ನಂಬಿಕೊಂಡಿರದೆ ಪಠ್ಯೇತರ ಚಟುವಟಿಕೆಗಳು, ಸಾಮಾನ್ಯ ಜ್ಞಾನ ,ಇತರ ಕ್ಷೇತ್ರಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.
ಮಾಜಿ ಸಚಿವರು ಹಾಗೂ ಕಾಲೇಜಿನ ಮುಖ್ಯಸ್ಥರಾದ ಕೃಷ್ಣ. ಜೆ. ಪಾಲೆಮಾರ್ ಅವರು ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿ, ವಿಕಾಸ್ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳನ್ನು ಶಿಸ್ತಿನ ಸಿಪಾಯಿಗಳಾಗಿ, ಉತ್ತಮ ನಾಗರಿಕರನ್ನಾಗಿ ಪರಿವರ್ತಿಸುತ್ತದೆ. ಮಕ್ಕಳು ಉತ್ತಮ ಪ್ರಜೆಗಳಾಗಬೇಕಾದರೆ ಶಿಕ್ಷಕರು, ಪೋಷಕರು ಹಾಗೂ ಆಡಳಿತ ಮಂಡಳಿಯ ಕಠಿಣ ಪರಿಶ್ರಮವು ಅವಶ್ಯಕವಾಗಿರುತ್ತದೆ. ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿ ಮುಂದಿನ ವೃತ್ತಿಯಲ್ಲಿ ಸಾಧನೆ ಮಾಡುವುದು ಮುಖ್ಯ ಎಂದರು.ಇದೇ ಸಂದರ್ಭದಲ್ಲಿ ಕಾಲೇಜಿನ ವಾರ್ಷಿಕ ಸಂಚಿಕೆ “ಆಕೃತಿ”ಯನ್ನು ಬಿಡುಗಡೆಗೊಳಿಸಲಾಯಿತು.
ಕಾಲೇಜಿನ ನೆಟ್ ಬಾಲ್ ತಂಡದ ತರಬೇತುದಾರ ಶ್ರೀಯುತ ಪ್ರೇಮನಾಥ ಶೆಟ್ಟಿ ಹಾಗೂ ಕಬಡ್ಡಿ ತಂಡದ ತರಬೇತುದಾರರಾದ ಶ್ರೀ ಆಕಾಶ್ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.ಕಳೆದ ಶೈಕ್ಷಣಿಕ ಸಾಲಿನಲ್ಲಿ ವಾಣಿಜ್ಯ,ವಿಜ್ಞಾನ,ಫಿಸಿಯೋಥೆರಪಿ ವಿಭಾಗಗಳಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
2017 ಮತ್ತು 2018ರ ಶೈಕ್ಷಣಿಕ ಸಾಲಿನಲ್ಲಿ ಸತತವಾಗಿ ಎರಡನೇ ಬಾರಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡ ಬಾಲಕರ ನೆಟ್ ಬಾಲ್ ತಂಡವನ್ನು ಮತ್ತು 2018ರ ಶೈಕ್ಷಣಿಕ ಸಾಲಿನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡ ಬಾಲಕರ ಕಬಡ್ಡಿ ತಂಡವನ್ನು ಅಭಿನಂದಿಸಲಾಯಿತು.
ವಾರ್ಷಿಕೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ, ಕಾಲೇಜಿನ ಸಿಬ್ಬಂದಿ ವರ್ಗದವರಿಗೆ ನಡೆಸಿದ ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾಸ್ಪರ್ಧೆಯ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.ವಿಕಾಸ್ ಎಜ್ಯುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿಗಳಾದ ಜೆ ಕೆ ರಾವ್, ಟ್ರಸ್ಟಿಗಳಾದ ಜೆ.ಕೊರಗಪ್ಪ, ಸೂರಜ್‌ಕುಮಾರ್‌ಕಲ್ಯ, ವಿದ್ಯಾ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷರಾದ ಮಾಧವ ಸುವರ್ಣ, ವಿಕಾಸ್‌ಎಜ್ಯು ಸೊಲ್ಯುಶನ್‌ನ ನಿರ್ದೇಶಕರಾದ ಡಾ.ಅನಂತ್ ಪ್ರಭು ಜಿ., ವಿಕಾಸ್ ಸಮೂಹ ಶಿಕ್ಷಣ ಸಂಸ್ಥೆಯ ಸಮನ್ವಯಾಧಿಕಾರಿ ಪಾರ್ಥಸಾರಥಿ ಪಾಲೆಮಾರ್, ಡೀನ್ ಡಾ.ಮಂಜುಳಾ ರಾವ್, ವಿಕಾಸ್ ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲ ಡಾ.ಅಜಯ್ ಠಾಕೂರ್ ಉಪಸ್ಥಿತರಿದ್ದರು.

Related posts

Leave a Reply