Header Ads
Header Ads
Header Ads
Breaking News

ವಿಜಯಪುರದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಕೊಲೆ ಪ್ರಕರಣ ನಾಗರಿಕ ಸಮಾಜ ತಲೆತಗ್ಗಿಸುವಂತ ಘಟನೆ ಪುತ್ತೂರಿನ ದಲಿತ ಸಂಘರ್ಷ ಸಮಿತಿ ಖಂಡನೆ

ವಿಜಯಪುರ ಜಿಲ್ಲೆಯಲ್ಲಿ ಅಪ್ರಪ್ತಾ ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತ ಘಟನೆಯಾಗಿದ್ದು, ಈ ಪ್ರಕರಣವನ್ನು ಪುತ್ತೂರಿನ ದಲಿತ ಸಂಘರ್ಷ ಸಮಿತಿ ಬಲವಾಗಿ ಖಂಡಿಸಿದೆ.ಪುತ್ತೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕ ಉದಯ್ ಕುಮಾರ್ ಎರಕ್ಕಳ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಬಗ್ಗೆ ಮತ್ತು ಈ ಕೃತ್ಯ ನಡೆಸಲು ಪ್ರಚೋದನೆ ಮಾಡಿದ ವ್ಯಕ್ತಿ, ಸಂಘಟನೆಗಳ ವಿರುದ್ದ ತನಿಖೆ ನಡೆಸಿ ಪ್ರಕರಣ ದಾಖಲಿಸುವಂತೆ ಸರಕಾರಕ್ಕೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ದಲಿತ ಸೇವಾ ಸಮಿತಿಯ ಜಿಲ್ಲಾಧ್ಯಕ್ಷ ಸೇಸಪ್ಪ ಬೆದ್ರಕಾಡು, ದಲಿತ ಸೇವಾ ಸಮಿತಿಯ ತಾಲೂಕು ಅಧ್ಯಕ್ಷ ರಾಜು ಹೊಸ್ಮಠ ಮನೊಹರ್ ಕರೆಕ್ಕಾಡು ಉಪಸ್ಥಿತರಿದ್ದರು.
ವರದಿ: ಪ್ರವೀಣ್ ಪುತ್ತೂರು

Related posts

Leave a Reply