Header Ads
Header Ads
Breaking News

ವಿಜಯಬ್ಯಾಂಕ್ ವಿಲೀನಕ್ಕೆ ವಿರೋಧ ಮಂಗಳೂರಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭ

ಕರಾವಳಿ ಭಾಗದ ಪ್ರತಿಷ್ಠಿತ ವಿಜಯ ಬ್ಯಾಂಕನ್ನು ಗುಜರಾತ್ ಮೂಲದ ಬ್ಯಾಂಕ್ ಆಫ್ ಬರೋಡ ಜತೆ ವಿಲೀನಗೊಳಿಸುವುದನ್ನು ವಿರೋಧಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡರು ಸಹಿತ ಬ್ಯಾಂಕ್ ಅಧಿಕಾರಿಗಳು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ನೇತೃತ್ವದಲ್ಲಿ ಮಂಗಳವಾರ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ವಿಜಯ ಬ್ಯಾಂಕ್ ಸ್ಥಾಪಕ ಎ.ಬಿ.ಶೆಟ್ಟಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದ ಐವನ್ ಡಿಸೋಜ, 4000 ಕೋಟಿ ರೂ.ಗಳಿಗೂ ಅಧಿಕ ನಷ್ಟದಲ್ಲಿರುವ ಬ್ಯಾಂಕ್ ಜತೆ ಲಾಭದಲ್ಲಿರುವ ಬ್ಯಾಂಕ್ ವಿಲೀನಗೊಳಿಸುವುದು ಖಂಡನೀಯ ಎಂದರು.ಕಪ್ಪು ಪಟ್ಟಿ ಧರಿಸಿ ನಡೆದ ಪ್ರತಿಭಟನೆಯಲ್ಲಿ ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘಟನೆಯ ಮಂಗಳೂರು ವಿಭಾಗದ ಅಧ್ಯಕ್ಷ ಸುರೇಂದ್ರನ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಉಪಮೇಯರ್ ಮುಹಮ್ಮದ್ ಕೆ., ಶಶಿಧರ್ ಹೆಗ್ಡೆ, ಸದಾಶಿವ ಉಳ್ಳಾಲ್, ಅಶೋಕ್ ಡಿ.ಕೆ. ಮೊದಲಾದ ಮುಖಂಡರು ಭಾಗವಹಿಸಿದ್ದರು.

Related posts

Leave a Reply