Header Ads
Header Ads
Breaking News

ವಿಟ್ಲದಲ್ಲಿ ತಾಲೂಕು ಮಟ್ಟದ ಕ್ರೀಡಾಂಗಣ ನಿರ್ಮಾಣ : ಅ.18ರಂದು ತಾಲೂಕು ಕ್ರೀಡಾಂಗಣ ಉದ್ಘಾಟನೆ

ವಿಟ್ಲ: ಬಂಟ್ವಾಳ ತಾಲ್ಲೂಕಿನಲ್ಲಿಯೇ ಪ್ರಥಮ ಎಂಬಂತೆ ವಿಟ್ಲ ಸಮೀಪದ ಕೇಪು ಕಲ್ಲಂಗಳ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅತೀ ವಿಶಾಲವಾದ ಸುಸಜ್ಜಿತ ತಾಲ್ಲೂಕು ಮಟ್ಟದ ಕ್ರೀಡಾಂಗಣ ನಿರ್ಮಾಣಗೊಳ್ಳುತ್ತಿದ್ದು, ಇದೇ 18ರಂದು ತಾಲ್ಲೂಕು ಮಟ್ಟದ ಕ್ರೀಡೋತ್ಸವದ ಜತೆಯಾಗಿ ಈ ಕ್ರೀಡಾಂಗಣ ಉದ್ಘಾಟನೆಗೊಳ್ಳಲಿದೆ.

ವಿಟ್ಲ ಸಮೀಪದ ಕೇಪು ಗ್ರಾಮದ ಕಲ್ಲಂಗಳ ಸರ್ಕಾರಿ ಪ್ರೌಢ ಶಾಲೆಯಲ್ಲಿ 3 ಎಕರೆ ಸರ್ಕಾರಿ ಜಾಗದಲ್ಲಿ ಸುಮಾರು 10 ವೆಚ್ಚದಲ್ಲಿ ಈ ಕ್ರೀಡಾಂಗಣ ನಿರ್ಮಾಣಗೊಳ್ಳುತ್ತಿದೆ. ಕಾಮಗಾರಿ ಹಂತಿಮ ಹಂತದಲ್ಲಿದೆ. ಅ. 18 ಮತ್ತು 19ರಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕೇಪು ಕಲ್ಲಂಗಳ ಪ್ರೌಢ ಶಾಲೆ ವತಿಯಿಂದ ತಾಲ್ಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ ನಡೆಯಲಿದೆ. ಇದೇ ಸಂದರ್ಭ ನೂತನ ಕ್ರೀಡಾಂಗಣ ಲೋಕಾರ್ಪಣೆಗೊಳ್ಳಲಿದೆ. 200ಮೀ ಸುತ್ತಳತೆಯ ಟ್ರಾಕ್, ಹೈಜಂಪ್, ಲಾಂಗ್ ಜಂಪ್ ಪ್ರತ್ಯೇಕ ಸ್ಥಳ ನಿರ್ಮಿಸಲಾಗುತ್ತಿದೆ. ಯಂತ್ರಗಳ ಮೂಲಕ ಸಮತಟ್ಟು ಮಾಡುವ ಕಾರ್ಯ ಭರದಿಂದ ನಡೆಯುತ್ತಿದೆ.

ಸುಸಜ್ಜಿತ ಕ್ರೀಡಾಂಗಣ ನಿರ್ಮಾಣಗೊಂಡಿದೆ. ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಮೂರು ಲಕ್ಷ ಅನುದಾನ ಒದಗಿಸಿದ್ದಾರೆ. ಅದೇ ವಿವಿಧ ಇಲಾಖೆಯಿಂದ ಅನುದಾನ ಬಂದಿದೆ. ಮುಂದಿನ ದಿನಗಳಲ್ಲಿ ಬಂಟ್ವಾಳ ತಾಲ್ಲೂಕು ಮಟ್ಟದ ಕ್ರೀಡಾಂಗಣವಾಗಿ ಮಾಡಲು ಪ್ರಯತ್ನಿಸುತ್ತೇವೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಜಯಶ್ರೀ ಕೊಡಂದೂರು ತಿಳಿಸಿದ್ದಾರೆ.

ಈಗಾಗಲೇ ಈ ಕ್ರೀಡಾಂಗಣಕ್ಕೆ 10 ಲಕ್ಷ ರೂ. ಖರ್ಚಾಗಿದೆ. ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ೩ ಲಕ್ಷ, ಜಿಲ್ಲಾ ಪಂಚಾಯಿತಿ ಸದಸ್ಯೆ ಜಯಶ್ರೀ ಕೊಡಂದೂರು 1.50 ಲಕ್ಷ, ತಾಲ್ಲೂಕು ಪಂಚಾಯಿತಿ ಸದಸ್ಯೆ ಕವಿತಾ ಸುಬ್ಬ ನಾಯ್ಕ್ 1 ಲಕ್ಷ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರ 1 ಲಕ್ಷ ಅನುದಾನ ಸೇರಿದಂತೆ ಊರ ದಾನಿಗಳಿಂದ, ಸಂಘಸಂಸ್ಥೆ ಸಂಗ್ರಹಿಸಲಾಗಿದೆ. ಎರಡು ದಿನಗಳ ಕಾಲ ನಡೆಯುವ ಕ್ರೀಡಾಕೂಟದಲ್ಲಿ ಪ್ರತಿದಿನ 800ಕ್ಕಿಂತಲೂ ಅಧಿಕ ವಿದ್ಯಾರ್ಥಿಗಳು, 250 ಅಧ್ಯಾಪಕರು, ಸೇರಿದಂತೆ 1500 ಜನರು ಭಾಗವಹಿಸಲಿದ್ದಾರೆ. 

ದಾನಿಗಳ, ವಿವಿಧ ಸಂಘಸಂಸ್ಥೆಗಳ, ವಿವಿಧ ಸಮಿತಿಗಳ ಸಹಕಾರದಲ್ಲಿ ಕ್ರೀಡಾಂಗಣ ನಿರ್ಮಾಣಗೊಂಡಿದೆ. ಈ ಕ್ರೀಡಾಂಗಣವನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ಸಂಬಂಧಪಟ್ಟವರಿಗೆ ಮನವಿ ಮಾಡಲಾಗಿದೆ ಎಂದು ಬಂಟ್ವಾಳ ತಾಲ್ಲೂಕು ಕ್ರೀಡಾಕೂಟದ ಅಧ್ಯಕ್ಷ ರಾಧಾಕೃಷ್ಣ ಚೆಲ್ಲಡ್ಕ ತಿಳಿಸಿದ್ದಾರೆ.

ಈ ಕ್ರೀಡಾಂಗಣವನ್ನು ಜಿಲ್ಲಾ ಕ್ರೀಡಾಂಗಣ ಮಾಡುವಂತೆ ಇನ್ನಷ್ಟು ಅನುದಾನ ಬಿಡಗಡೆಗೊಳಿಸಲು ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಲಾಗಿದೆ. ಇದು ಜಿಲ್ಲಾ ಮಟ್ಟದ ಕ್ರೀಡಾಂಗಣಯಾಗಿ ನಿರ್ಮಾಣವಾದರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ದೂರದ ಪ್ರದೇಶಕ್ಕೆ ಹೋಗುವುದನ್ನು ತಪ್ಪಿಸಬಹುದು. 

ತಾಲ್ಲೂಕು ಕ್ರೀಡಾಕೂಟದ ಅಧ್ಯಕ್ಷರಾಗಿ ರಾಧಾಕೃಷ್ಣ ಚೆಲ್ಲಡ್ಕ, ಎಸ್‌ಡಿಎಂಸಿ ಕಾರ್ಯಾಧ್ಯಕ್ಷರಾಗಿ ಬಾಲಚಂದ್ರ ಕಟ್ಟೆ, ಆರ್ಥಿಕ ಸಮಿತಿ ಅಧ್ಯಕ್ಷರಾಗಿ ರಾಜೀವ ಭಂಡಾರಿ, ಕೇಪು ಗ್ರಾಮ ಪಂಚಾಯಿತಿ ಅಧ್ಯಕ್ಷ ತಾರಾನಾಥ ಆಳ್ವ, ಶಾಲಾ ಮುಖ್ಯೋಪಾಧ್ಯಾಯಿನಿ ಮಾಲತಿ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಶಿಕ್ಷಣ ಪರಿವೀಕ್ಷಣಾಧಿಕಾರಿ ರತ್ನಾವತಿ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಚಿನ್ನಪ್ಪ, ದೈಹಿಕ ಶಿಕ್ಷಕಿ ಪುಷ್ಪಾ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು, ಸದಸ್ಯರು, ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ವಿವಿಧ ಸಮಿತಿ ಪದಾಧಿಕಾರಿಗಳು ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ವರದಿ: ಮಹಮ್ಮದ್ ಆಲಿ ವಿಟ್ಲ

Related posts

Leave a Reply

Your email address will not be published. Required fields are marked *