Header Ads
Breaking News

ವಿಟ್ಲದಲ್ಲಿ ಸರ್ಕಾರಿ ಶಾಲೆಯಲ್ಲಿ ನಡೆದ 15ನೇ ಮಕ್ಕಳ ಸಾಹಿತ್ಯ ಸಮ್ಮೇಳನ

ವಿಟ್ಲ: ಮಕ್ಕಳ ಲೋಕ, ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ವಿಟ್ಲ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ 15ನೇ ಮಕ್ಕಳ ಸಾಹಿತ್ಯ ಸಮ್ಮೇಳನ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪೆರುವಾಯಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ವೀಕ್ಷಿತ ಅವರು ಪ್ರತಿಭಾ ಪ್ರದರ್ಶನ ಕ್ಕೆ ಮಕ್ಕಳ ಸಾಹಿತ್ಯ ಸಮ್ಮೇಳನದಂತಹಾ ಕಾರ್ಯಕ್ರಮಗಳು ಪ್ರೇರಣೆಯಾಗುತ್ತದೆ. ಆಂಗ್ಲಭಾಷೆಯಅವಲಂಬನೆ ಕಡಿಮೆಯಾಗಬೇಕು. ಸಾಹಿತ್ಯ ಸಮ್ಮೇಳನ ಮಕ್ಕಳ ಬಾಳಿನ ಜ್ಯೋತಿಯಾಗಿದೆ ಎಂದರು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಮ್ಮೇಳನಾಧ್ಯಕ್ಷೆ, ವಿಟ್ಲ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಧನ್ಯಶ್ರೀ, ವಿದ್ಯಾ ದೇಗುಲಗಳು ಸಾಹಿತ್ಯದ ಚಟುವಟಿಕೆಗಳಿಗೆ ನೀಡುವಂತಾಗಬೇಕು. ಕೇವಲ ಪಾಠ ಪ್ರವಚನಗಳನ್ನು ಮಾತ್ರ ಕೇಳುವ, ಜತೆಗೆ ಮಕ್ಕಳ ಕವನ ರಚಿಸುವವರ ಸಾಂಗತ್ಯದ ಅವಶ್ಯಕತೆ ಇದೆ. ಮಕ್ಕಳ ಸಾಹಿತ್ಯ ಸಂಸ್ಕೃತಿಯ ಒಲವು ಹೆಚ್ಚಿದಷ್ಟು ಸಾಹಿತ್ಯ ಕ್ಷೇತ್ರ ಪ್ರಬಲವಾಗುತ್ತದೆ ಹೇಳಿದರು.

ಸುದಾನ ವಸತಿ ಶಾಲೆಯ ಸಹಶಿಕ್ಷಕಿ ಕವಿತಾ ಅಡೂರು ಪುಸ್ತಕ ಬಿಡುಗಡೆಗೊಳಿಸಿದರು. ಕನ್ನಡ ಸಂಘದ ಅಧ್ಯಕ್ಷ ಅನಂತಕೃಷ್ಣ ಹೆಬ್ಬಾರ್ ಕನ್ನಡ ಧ್ವಜಾರೋಹಣಗೈದರು. ಸಾಹಿತಿ ವೀಮಾ ಭಟ್ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣಗೈದರು. ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ದಮಯಂತಿ ಮೆರವಣಿಗೆಗೆ ಚಾಲನೆ ನೀಡಿದರು. ಮಕ್ಕಳ ಲೋಕದ ಕಾರ್ಯದರ್ಶಿ ಶಿವರಾಮ ಭಟ್ ಪೇಜಾವರ ಶ್ರೀಗಳಿಗೆ ನುಡಿನಮನ ಸಲ್ಲಿಸಿದರು.

ಕಾಸರಗೋಡು ಬೇಕೂರು ಜಿಎಸ್‍ಎಸ್ ಶಾಲೆಯ ಕಾವ್ಯ, ಸ್ಮರಣಾ ಸಂಚಿಕೆ ಸಂಪಾದಕ ರಮೇಶ್ ಎಂ ಬಾಯಾರು, ಶಾಲಾ ಗೌರವಾಧ್ಯಕ್ಷ ಸುಬ್ರಾಯ ಪೈ, ಎಸ್ಡಿಎಂಸಿ ಕಾರ್ಯಾಧ್ಯಕ್ಷ ರಮೇಶ್ ಆಳ್ವ, ಮುಖ್ಯೋಪಾಧ್ಯಾಯಿನಿ ಪುಷ್ಪಾ ಎಚ್, ವಿಟ್ಲ ಜೇಸಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅಭಿಲಾಷ್, ವಿಟ್ಲ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಪ್ರತೀಕ್ಷಾ, ಅಡ್ಯನಡ್ಕ ಜನತಾ ಪದವಿ ಪೂರ್ವ ಕಾಲೇಜಿನ ಚೈತನ್ಯ ಪಕಳಕುಂಜ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *