Header Ads
Header Ads
Header Ads
Breaking News

ವಿಟ್ಲದ ಕಡೇಶ್ವಾಲ್ಯದಲ್ಲಿ ಅಕ್ರಮ ಗುಡಿಸಲು ನಿರ್ಮಾಣ ಭೂ ವಂಚಿತರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯ ಅ.9 ರಂದು ದಲಿತ್ ಸೇವಾ ಸಮಿತಿಯಿಂದ ಉಪವಾಸ ಸತ್ಯಾಗ್ರಹ

ವಿಟ್ಲದ ಕಡೇಶ್ವಾಲ್ಯ ಗ್ರಾಮದಲ್ಲಿ ಅಕ್ರಮವಾಗಿ ಗುಡಿಸಲು ನಿರ್ಮಾಣ ಮಾಡಿದ್ದರ ವಿರುದ್ಧ ಹಾಗೂ ನಕ್ಷೆ ತಯಾರಾಗಿರುವ ಭೂ ವಂಚಿತರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಅಕ್ಟೋಬರ್ 9 ರಂದು ಬಿಸಿ ರೋಡಿನಲ್ಲಿ ಉಪವಾಸ ಸತ್ಯಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು ಅವರು ತಿಳಿಸಿದ್ದಾರೆ.

ವಿಟ್ಲದ ಪ್ರೆಸ್ ಕ್ಲಬ್‌ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಕ್ರಮವಾಗಿ ಗುಡಿಸಲು ನಿರ್ಮಾಣ ಮಾಡಿ ಅತಿಕ್ರಮಣ ಮಾಡಿರುವುದನ್ನು ತೆರವುಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಬಿ ರಮಾನಾಥ ರೈ ಹಾಗೂ ಜಿಲ್ಲಾಧಿಕಾರಿಗೆ ದೂರು ನೀಡಲಾಗಿತ್ತು. ಈ ಬಗ್ಗೆ ಪ್ರತಿಭಟನೆ ಕೂಡ ನಡೆಸಲಾಗಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕಡೇಶ್ವಾಲ್ಯ ಗ್ರಾಮದ ಮೂವರಿಗೆ ಹಾಗೂ ಇತರ ಗ್ರಾಮದವರಿಗೆ ನಕ್ಷೆ ತಯಾರಾಗಿದ್ದರೂ ಅದನ್ನು ಪರಿಗಣಿಸದೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ, ಸಂಚಾಲಕ ಗೋಪಾಲ ನೇರಳಕಟ್ಟೆ, ಮೋಹನದಾಸ್ ಯು, ಪ್ರಸಾದ್ ಅನಂತಾಡಿ ಉಪಸ್ಥಿತರಿದ್ದರು.

ವರದಿ: ಮಹಮ್ಮದ್ ಆಲಿ ವಿಟ್ಲ

Related posts

Leave a Reply