Header Ads
Header Ads
Header Ads
Breaking News

ವಿಟ್ಲದ ಪಳ್ಳದಕೋಡಿ ಶ್ರೀ ರಾಮ ಭಜನಾ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ

ವಿಟ್ಲದ ಕರೋಪಾಡಿ ಗ್ರಾಮದ ಪಳ್ಳದಕೋಡಿ ಶ್ರೀ ರಾಮ ಭಜನಾ ಮಂದಿರ ಪುನರ್ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಶಿಲಾನ್ಯಾಸ ನಡೆಸಿ ಮಾತನಾಡಿದ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಗುರುದೇವಾನಂದ ಸ್ವಾಮೀಜಿ ಅವರು ಗ್ರಾಮದ ಅಭಿವೃದ್ಧಿಯಲ್ಲಿ ಒಳ್ಳೆಯ ಮನಸ್ಸಿನಿಂದ ಪ್ರತಿಯೊಬ್ಬರೂ ತೊಡಗಿಕೊಳ್ಳಬೇಕು. ಭಜನೆ ಎಂಬುದು ನಾಡಿನ ಸಂಸ್ಕೃತಿಯಾಗಿದ್ದು, ಸಂಸ್ಕಾರವನ್ನು ನೀಡುವ ಕಾರ್ಯಮಾಡುತ್ತದೆ ಎಂದು ಹೇಳಿದರು. 

ಕಣಿಯೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಶ್ರೀ ಮಹಾಬಲ ಸ್ವಾಮೀಜಿ, ಒಡಿಯೂರು ಶ್ರೀ ಗುರುದೇವದತ್ತ ಸಂಸ್ದಾನದ ಸಾಧ್ವಿ ಮಾತಾನಂದಮಯೀ, ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, ವಗೆನಾಡು ಸುಬ್ರಾಯ ದೇವಸ್ಥಾನದ ಆಡಳಿತ ಮೊಕ್ತೇಸರ ಮುಗುಳಿ ತಿರುಮಲೇಶ್ವರ ಭಟ್, ಪುನರ್ ನಿರ್ಮಾಣ ಸಮಿತಿ ಅಧ್ಯಕ್ಷ ಪಟ್ಲಗುತ್ತು ಮಹಾಬಲ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *