Header Ads
Breaking News

ಪೊನ್ನೊಟ್ಟು ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ವಾರ್ಷಿಕ ಸತ್ಯನಾರಾಯಣ ಪೂಜೆ, ಸಾಧಕರಿಗೆ ಸನ್ಮಾನ

ವಿಟ್ಲ: ವಿಟ್ಲದ ಬಿಲ್ಲವ ಸಂಘ ಮತ್ತು ಮಹಿಳಾ ಘಟಕದ ಆಶ್ರಯದಲ್ಲಿ ಪೊನ್ನೊಟ್ಟು ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ವಾರ್ಷಿಕ ಸತ್ಯನಾರಾಯಣ ಪೂಜೆ, ವಿದ್ಯಾರ್ಥಿ ವೇತನ ವಿತರಣೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. 

ಬಿಲ್ಲವ ಸಂಘದ ಅಧ್ಯಕ್ಷ ಜಗದೀಶ ಪಾಣೆಮಜಲು ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ರೋಟರಿ ಜಿಲ್ಲೆ 3181ರ ಗವರ್ನರ್ ರೋಹಿನಾಥ ಪಾದೆ, ಸರಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್, ಪುತ್ತೂರು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಗಾಯತ್ರಿ ಸಿ.ಎಚ್. ಅವರನ್ನು ಸನ್ಮಾನಿಸಲಾಯಿತು. ಪ್ರತಿಭಾವಂತ ಎಸ್‍ಎಸ್‍ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಹರೀಶ್ ಶಾಂತಿ ಅವರ ನೇತೃತ್ವದಲ್ಲಿ ವಾರ್ಷಿಕ ಸತ್ಯನಾರಾಯಣ ಪೂಜೆ ನೆರವೇರಿತು. ಬಳಿಕ ಪ್ರಸಾದ ವಿತರಿಸಲಾಯಿತು.

ಈ ಸಂದರ್ಭ ಆಶೀರ್ವಚನ ನೀಡಿದ ಕಾರ್ಕಳ ಬಲ್ಯೊಟ್ಟು ಹೊಸ್ಮಾರು ಶ್ರೀ ಗುರುಕೃಪಾ ಸೇವಾಶ್ರಮದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಅವರು ರಾಗ, ದ್ವೇಷ, ಸಂಕುಚಿತ ಮನೋಭಾವನೆಯನ್ನು ಬಿಡಬೇಕು. ಉಪಕಾರ ಸ್ಮರಣೆಯನ್ನಿರಿಸಿಕೊಳ್ಳಬೇಕು. ತಾನು, ತನ್ನ ಕುಟುಂಬಕ್ಕೇ ಸೀಮಿತರಾಗದೇ ಸಮಾಜ ಸೇವೆಯನ್ನು ಮಾಡಬೇಕು. ಬಡ ವಿದ್ಯಾರ್ಥಿಗಳ ಶಿಕ್ಷಣ ವ್ಯವಸ್ಥೆಯನ್ನು ಮಾಡಬೇಕು. ಸಂಘಟನೆಯನ್ನು ಬಲಪಡಿಸಬೇಕು ಎಂದು ನುಡಿದರು.

ಮುಖ್ಯ ಅತಿಥಿಗಳಾಗಿ ಜಯಪ್ರಕಾಶ್ ಎ., ವಿಟ್ಲ ಅಶ್ವಿನಿ ಡೆಂಟಲ್ ಕ್ಲಿನಿಕ್‍ನ ಡಾ.ಕಿಶೋರ್ ಬಂಗೇರ, ವಿಟ್ಲ ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮಲತಾ ಸೋಮಶೇಖರ್, ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಎನ್., ವಿಟ್ಲ ಬಿಲ್ಲವ ಸಂಘದ ಕಾರ್ಯದರ್ಶಿ ಜಯಂತ್ ಪಿ., ಸಂಜೀವ ಪೂಜಾರಿ ಎಂ., ಚಂದ್ರಹಾಸ ಸುವರ್ಣ, ಡಾ.ಗೀತಪ್ರಕಾಶ್ ಎ., ಬಿಲ್ಲವ ಸಂಘದ ಗೌರವಾಧ್ಯಕ್ಷ ಸತ್ಯನಾರಾಯಣ ಎಸ್., ಪ್ರಮುಖರಾದ ಬಾಬು ಕೆ.ವಿ., ರಮೇಶ್ ಆರ್.ಎಸ್., ಮಾಧವ ಪೂಜಾರಿ ಪಟ್ಲ, ಹರೀಶ್ ಪೂಜಾರಿ, ಜಯಪ್ರಕಾಶ್, ಮಹಿಳಾ ಸಂಘದ ಗೌರವಾಧ್ಯಕ್ಷೆ ಪುಷ್ಪಾ ಸುಂದರ ಪೂಜಾರಿ, ಸುಜಾತಾ ಸಂಜೀವ ಪೂಜಾರಿ, ಸಂದೀಪ್, ವನಿತಾ ಚಂದ್ರಹಾಸ ಸುವರ್ಣ, ತುಷಾರಾ ದಾಮೋದರ್, ಹರೀಶ್ ಸಿ.ಎಚ್., ಲಕ್ಷ್ಮೀಶ್ ಸುವರ್ಣ ಮಂಗಳೂರು, ಪ್ರವೀಣ್ ಅಳಿಕೆ, ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *