Header Ads
Header Ads
Breaking News

ವಿಟ್ಲ:ಶ್ರೀರಾಮ ಜನ್ಮ ಭೂಮಿಯಲ್ಲಿ ಭವ್ಯ ಮಂದಿರ ನಿರ್ಮಾಣಕ್ಕಾಗಿ ಬೃಹತ್ ಜನಾಗ್ರಹ ಸಭೆ

 

 ದಕ್ಷಿಣ ಕನ್ನಡ ಜಿಲ್ಲಾ ವಿಶ್ವ ಹಿಂದು ಪರಿಷತ್ ವತಿಯಿಂದ ನ.25ರಂದು ಮಂಗಳೂರು ನೆಹರು ನಗರದಲ್ಲಿ ನಡೆಯಲಿರುವ ಅಯೋಧ್ಯೆಯ ಶ್ರೀರಾಮ ಜನ್ಮ ಭೂಮಿಯಲ್ಲಿ ಭವ್ಯ ಮಂದಿರ ನಿರ್ಮಾಣಕ್ಕಾಗಿ ಬೃಹತ್ ಜನಾಗ್ರಹ ಸಭೆಯ ಪ್ರಯುಕ್ತ ವಿಟ್ಲದಿಂದ 10 ಸಾವಿರ ಜನರು ಭಾಗವಹಿಸಲಿದ್ದಾರೆ ಎಂದು ವಿಶ್ವ ಹಿಂದು ಪರಿಷತ್ ಪುತ್ತೂರು ಜಿಲ್ಲಾ ಸಹಕಾರ್ಯದರ್ಶಿ ಗೋವರ್ಧನ ಕುಮಾರ್ ತಿಳಿಸಿದರು.

ಅವರು ವಿಟ್ಲದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪೂರ್ವಭಾವಿಯಾಗಿ ಗುರುವಾರ ಬೆಳಿಗ್ಗೆ 6 ಗಂಟೆಯಿಂದ ವಿಟ್ಲದ ಪ್ರಮುಖ ಬೀದಿಗಳಲ್ಲಿ ಶ್ರೀರಾಮ ಜಪ ಸಂಕೀರ್ತನೆ ಯಾತ್ರೆ ನಡೆಯಲಿದ್ದು, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಮಾಪ್ತಿಯಾಗಲಿದೆ ಎಂದರು. ರಾಮಮಂದಿರ ನಿರ್ಮಾಣಕ್ಕೆ ಹಲವು ಹೋರಾಟಗಳು ನಡೆದಿದೆ. ಹಲವು ಕಾರ್ಯಕರ್ತರ ಬಲಿದಾನವಾಗಿದೆ. ತೀರ್ಪುಗಳು ಕೂಡ ನಮಗೆ ಪೂರ್ವಕವಾಗಿ ಬಂದಿಲ್ಲ. ಈ ಹಿನ್ನೆಯಲ್ಲಿ524ಲೋಕಸಭಾ ಕ್ಷೇತ್ರದಲ್ಲಿ ಬೃಹತ್ ಜನಾಗ್ರಹ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಭಜರಂಗ ದಳ ಸಹ ಸಂಯೋಜಕ ಜಯಂತ ಸಿ.ಎಚ್, ವಿಶ್ವ ಹಿಂದು ಪರಿಷತ್ ವಿಟ್ಲ ಪ್ರಖಂಡ ಅಧ್ಯಕ್ಷ ಕೃಷ್ಣಪ್ಪ ಕಲ್ಲಡ್ಕ, ಕಾರ್ಯಾಧ್ಯಕ್ಷ ಪದ್ಮನಾಭ ಕಟ್ಟೆ ಉಪಸ್ಥಿತರಿದ್ದರು.

Related posts

Leave a Reply