Header Ads
Breaking News

ವಿಟ್ಲದಲ್ಲಿ ಅಪ್ರಾಪ್ತೆ ಬಾಲಕಿ ಮೇಲೆ ನಿರಂತರ ಅತ್ಯಾಚಾರ: ಗ್ರಾ.ಪಂ ಸಿಬ್ಬಂದಿ ಸಹಿತ ಮೂವರು ಅರೆಸ್ಟ್!

 ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳ ಮೇಲೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಸಹಿತ ಐವರ ತಂಡ2018ರ ಡಿಸೆಂಬರ್‌ನಿಂದ ನಿರಂತರ ಅತ್ಯಾಚಾರ ಎಸಗಿ ಆಕೆಗೆ ಗರ್ಭ ಭರಿಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.  ಇನ್ನಿಬ್ಬರು ತಲೆಮರೆಸಿದ್ದು ಅವರಿಗಾಗಿ ಪೊಲೀಸರು ಶೋಧ ಮೂಮದುವರೆಸಿದ್ದಾರೆ. ಗ್ರಾಮ ಪಂಚಾಯತ್‌ನ ತೆರಿಗೆ ಸಂಗ್ರಹಕ ಕೃಷ್ಣಾ ನಾಯ್ಕ್ (38), ಆಟೊ ಚಾಲಕ ಧನುಷ್ ನಾಯ್ಕ್ (22) ಹಾಗೂ ಗಣೇಶ್ ಬಂಧಿತ ಆರೋಪಿಗಳು. ಘಟನೆಯ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಎಸ್‌ಸಿ-ಎಸ್‌ಪಿ ಹಾಗೂ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

Related posts

Leave a Reply

Your email address will not be published. Required fields are marked *