Header Ads
Header Ads
Header Ads
Breaking News

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ವಿಟ್ಲ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮ

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಸಮಾರಂಭವು ವಿಟ್ಲ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆಯಿತು.
ಪುತ್ತೂರು ಶಾಸಕಿ ಶಕುಂತಳಾ ಟಿ.ಶೆಟ್ಟಿ ಅವರ ಸಮ್ಮುಖದಲ್ಲಿ ಅಧ್ಯಕ್ಷ ಪ್ರವೀಣಚಂದ್ರ ಆಳ್ವ ಅವರು ನೂತನ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಬಳಿಕ ಅವರು ಇದೇ ಸಂದರ್ಭ ಪಕ್ಷದ ವತಿಯಿಂದ ನೀಡಿದ ಸನ್ಮಾನವನ್ನು ಸ್ವೀಕರಿಸಿದರು.

ಪುತ್ತೂರು ಶಾಸಕಿ ಶಕುಂತಳಾ ಟಿ.ಶೆಟ್ಟಿ ಅವರು ಮಾತನಾಡಿ, ಹಿಂದೂ ಎಂದರೆ ಭಾವೈಕ್ಯದ ಸಂಕೇತ. ಹಿಂದುತ್ವದ ಪ್ರಕಾರ ಎಲ್ಲರನ್ನು ಪ್ರೀತಿ, ವಿಶ್ವಾಸದಿಂದ ಕಾಣಬೇಕು. ಪರಸ್ಪರ ಸೌಹಾರ್ದಯುತವಾಗಿ ಬಾಳುವಂತಾಗಬೇಕು. ಯಾರೂ ಪಕ್ಷದ್ರೋಹ ಮಾಡಬಾರದು. ಕಾಂಗ್ರೆಸ್ ಪಕ್ಷದವರಿಂದಲೇ ಕಾಂಗ್ರೆಸ್ ಸೋಲಬಾರದು. ಹಿಂದಿನ ಅವಧಿಯಲ್ಲಿ ಸಾಧಿಸಿದ ಗೆಲುವನ್ನು ಉಳಿಸಿಕೊಳ್ಳಬೇಕು. ಕಾರ್ಯಕರ್ತರು ಶಕ್ತಿ ಮೀರಿ ಶ್ರಮಿಸಬೇಕು. ಕಾಂಗ್ರೆಸ್ ನೇತೃತ್ವದ ಸರಕಾರ ಚುನಾವಣೆ ಸಂದರ್ಭದಲ್ಲಿ ಹೊರಡಿಸಿದ ಪ್ರಣಾಳಿಕೆಯ ಶೇ.೯೫ರಷ್ಟನ್ನು ಪೂರೈಸಿದೆ. ಸರಕಾರದ ಸಾಧನೆಗಳನ್ನು ಮನೆ ಮನೆಗೆ ತಿಳಿಸುವ ಕಾರ್ಯ ಕಾರ್ಯಕರ್ತರಿಂದ ಮಾತ್ರ ಸಾಧ್ಯ ಎಂದರು.

ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್.ಮಹಮ್ಮದ್, ಪುತ್ತೂರು-ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿ ಸವಿತಾ ರಮೇಶ್, ಬಂಟ್ವಾಳ ಇಂಟಕ್ ಅಧ್ಯಕ್ಷ ರಮಾನಾಥ ವಿಟ್ಲ, ಕಾರ್ಮಿಕ ಘಟಕದ ಅಧ್ಯಕ್ಷ ಮುರಳೀಧರ ಶೆಟ್ಟಿ ಕಲ್ಲಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ವಿ.ಟಿ.ತೌಸೀಫ್, ಪುತ್ತೂರು ಪುಡಾ ಅಧ್ಯಕ್ಷ ಕೌಶಲ್‌ಪ್ರಸಾದ್ ಶೆಟ್ಟಿ, ಡಿಸಿಸಿ ಸದಸ್ಯ ಮಾಣಿಕ್‌ರಾಜ್ ಪಡಿವಾಳ್, ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷ ಉಲ್ಲಾಸ್ ಕೋಟ್ಯಾನ್, ಪುತ್ತೂರು ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರು, ಪುತ್ತೂರು ಎಪಿ‌ಎಂಸಿ ಸದಸ್ಯ ಕಾರ್ತಿಕ್ ರೈ ಬೆಳ್ಳಿಪ್ಪಾಡಿ, ನಾಮನಿರ್ದೇಶಿತ ಸದಸ್ಯೆ ಗೀತಾ ದಾಸರಮೂಲೆ, ಬ್ಲಾಕ್ ಉಪಾಧ್ಯಕ್ಷ ಅಶ್ರಫ್ ಬಸ್ತಿಕಾರು, ಕಿಸಾನ್ ಘಟಕದ ಮಾಜಿ ಅಧ್ಯಕ್ಷ ವಿನ್ಸಂಟ್ ವೇಗಸ್,ಉಪ್ಪಿನಂಗಡಿ ಗ್ರಾ.ಪಂ.ಅಧ್ಯಕ್ಷ ರಹಿಮಾನ್, ಪೆರುವಾಯಿ ಗ್ರಾ.ಪಂ.ಅಧ್ಯಕ್ಷ ರಾಲ್ಫ್ ಡಿಸೋಜಾ, ಅಕ್ರಮ ಸಕ್ರಮ ಸಮಿತಿಯ ವಾಸು ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply