Header Ads
Breaking News

ವಿಟ್ಲ : ಕರ್ತವ್ಯದಲ್ಲಿದ್ದ ಎಸ್‍ಐ ಮೇಲೆ ಗುಂಡಿನ ದಾಳಿಗೆ ಯತ್ನ

ವಿಟ್ಲ: ಕರ್ತವ್ಯದಲ್ಲಿದ್ದ ಎಸ್.ಐ.ಮೇಲೆ ಗುಂಡಿನ ದಾಳಿ ನಡೆಸಿ ಕೊಲೆ ಮಾಡಲು ಯತ್ನಿಸಿದ ದುಷ್ಕರ್ಮಿ ಪೊಲೀಸರ ಅತಿಥಿಯಾದ ಘಟನೆ ವಿಟ್ಲ ಕೊಡಂಗೆ ಚೆಕ್ ಪೊಸ್ಟ್ ನಲ್ಲಿ ಇಂದು ಮುಂಜಾನೆ ವೇಳೆ ನಡೆದಿದೆ.

ವಿಟ್ಲ ಎಸ್ ಐ ವಿನೋದ್ ರೆಡ್ಡಿ ಮೇಲೆ ದುಷ್ಕರ್ಮಿಯಿಂದ ಗುಂಡಿನ ದಾಳಿ ನಡೆದಿದೆ. ವಿಟ್ಲ ಸಮೀಪದ ಸಾಲೆತ್ತೂರು ಕೊಡಂಗೆ ಚೆಕ್ ಪೊಸ್ಟ್ ನಲ್ಲಿ ವಿಟ್ಲ ಎಸ್.ಐ.ವಿನೋದ್ ರೆಡ್ಡಿ ಮತ್ತು ಸಿಬ್ಬಂದಿಗಳು ವಾಹನ ಗಳ ತಪಾಸಣೆ ನಡೆಸುತ್ತಿದ್ದ ವೇಳೆ ಬಿಳಿ ಬಣ್ಣದ ಕಾರಿ

ನಲ್ಲಿದ್ದ ದುಷ್ಕರ್ಮಿಯೊರ್ವ ಎಸ್.ಐ.ವಿನೋದ್ ರೆಡ್ಡಿ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೇ ಕಾರ್ಯಚರಣೆ ನಡೆಸಿ ದ ಸಿಬ್ಬಂದಿ ಗಳು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ಕೇರಳದಲ್ಲಿ ಗುಂಡಿನ ದಾಳಿ ನಡೆಸಿ ವಿಟ್ಲ ಮೂಲಕ ಪರಾರಿಯಾಗಲು ಮುಂದಾಗುತ್ತಿದ್ದಂತೆ ವಿಟ್ಲ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ವಿಟ್ಲ ಎಸೈ ನೇತೃತ್ವದ ತಂಡ ಆರೋಪಿಗಳನ್ನು ಅಡ್ಡ ಗಟ್ಟಲು ಮುಂದಾದಾಗ ಅವರ ಮೇಲೆ ದಾಳಿಗೆ ಮುಂದಾಗಿದ್ದಾರೆ ಎನ್ನಲಾಗಿದೆ.

Related posts

Leave a Reply

Your email address will not be published. Required fields are marked *