Header Ads
Breaking News

ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಲ್‌ಇಡಿ ಪೆನೆಲ್ ಸ್ಮಾರ್ಟ್ ಕ್ಲಾಸ್‌ಗೆ ಚಾಲನೆ

ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯಲ್ಲಿ ರಾಜ್ಯದಲ್ಲೇ ಪ್ರಥಮ ಬಾರಿ ಎಲ್‌ಇಡಿ ಪೆನೆಲ್ ಸ್ಮಾರ್ಟ್ ಕ್ಲಾಸ್‌ಗೆ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಚಾಲನೆ ನೀಡಿದ್ರು.

ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳ ಸರ್ವಾಂಗೀಣ ಉಜ್ವಲ ಭವಿಷ್ಯವನ್ನು ಚಿಂತಿಸುವ ಶಾಲೆಗಳಿಂದ ಗುಣಾತ್ಮಕ ಶಿಕ್ಷಣ ನೀಡಲು ಸಾಧ್ಯವಿದೆ. ಮಕ್ಕಳನ್ನು ಅಂಕ ಗಳಿಸುವ ಯಂತ್ರಗಳನ್ನಾಗಿಸುವ ಭ್ರಮೆಯನ್ನು ಬಿಟ್ಟು ಜೀವನದಲ್ಲಿ ಸ್ವಂತಿಕೆಯಿಂದ ಮೇಲೇರಲು ಪೋಷಕರು, ಶಿಕ್ಷಕರು ಮಾರ್ಗದರ್ಶಕರಾಗಬೇಕು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ವಿದ್ಯಾ ಸಂಸ್ಥೆಯ ಕಾರ್‍ಯದರ್ಶಿ ಚಂದ್ರಶೇಖರ್ ಭಟ್, ಸಂದೇಶ್ ಹೊಸಳ್ಳಿ, ವಿಟ್ಲ ಸರಕಾರಿ ಮಾದರಿ ಶಾಲೆಯ ಗೌರವಾಧ್ಯಕ್ಷ ಸುಬ್ರಾಯ ಪೈ, ವಿಠಲ್ ಜೇಸೀಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಲ್.ಎನ್.ಕೂಡೂರು, ಪ್ರಾಂಶುಪಾಲ ಜಯರಾಮ ರೈ, ಹಾಗೂ ಮತ್ತಿತರರು ಭಾಗವಹಿಸಿದ್ದರು.

Related posts

Leave a Reply

Your email address will not be published. Required fields are marked *