Header Ads
Breaking News

ವಿಟ್ಲ ನಗರ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಕಾರ್ಯಕರ್ತರ ಸಭೆ

ವಿಟ್ಲ: ವಿಟ್ಲ ನಗರ ಕಾಂಗ್ರೆಸ್ ವತಿಯಿಂದ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಬೊಳಂತಿಮೊಗರು, ನೆಲ್ಲಿಗುಡ್ಡೆ 17 ಮತ್ತು 18ನೇ ವಾರ್ಡ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು.

ಪುತ್ತೂರು ಕ್ಷೇತ್ರದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ ನನ್ನ ಅವಧಿಯಲ್ಲಿ ಈ ಭಾಗಕ್ಕೆ ಕೋಟಿ ಕೋಟಿ ಅನುದಾನ ಬಂದಿದೆ. ಕೆಲಸ ಮಾಡಿದರೆ ಜನ ಓಟು ಕೊಡುವುದಿಲ್ಲ ಎಂದು ನನಗೆ ಅರಿವಾಗಿದೆ. 94 ಸಿ, ಅಕ್ರಮ ಸಕ್ರಮ ಹಕ್ಕು ಪತ್ರ ನೀಡಿದ್ದೇವೆ. ಬಿಜೆಪಿ ಅಂಬಾನಿ , ಅದಾನಿಯನ್ನು ಸಾಕಿದೆ. ಕಾಂಗ್ರೆಸ್ ಬಡವರ ಪರವಾಗಿ ನಿಂತಿದೆ. ಬಿಜೆಪಿಯ ವಂಚನೆ ಮಾತಿನ ಮೂಲಕ ಜನರ ದಾರಿ ತಪ್ಪಿಸುತ್ತಿದೆ. ದೇಶದ ಜನರಿಗೆ ನೋವು, ಅನ್ಯಾಯ ಆದಾಗ ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯಗಳು ನಡೆಯಬೇಕು. ಮಾನವೀಯ ಮೌಲ್ಯ ಬೆಳೆಸಿಕೊಂಡಾಗ ದೇಶದ ರಕ್ಷಣೆ ಆಗುತ್ತದೆ. ಜನರ ಸಮಸ್ಯೆಗೆ ಸ್ಪಂದಿಸಬೇಕು. ಒಳ್ಳೆಯ ವ್ಯಕ್ತಿತ್ವ , ಜಾತ್ಯಾತೀತ ಭಾರತ ಕಟ್ಟಿಕೊಳ್ಳಬೇಕು ಎಂದು ಹೇಳಿದರು.

ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರಳೀಧರ ಮಠಂತಬೆಟ್ಟು ಅಧ್ಯಕ್ಷತೆ ವಹಿಸಿದ್ದರು.ವಕ್ತಾರ ರಮಾನಾಥ ವಿಟ್ಲ, ಜಿಲ್ಲಾ ಪಂಚಾಯತ್ ಸದಸ್ಯ ಎಂ ಎಸ್ ಮಹಮ್ಮದ್, ಪುತ್ತೂರು ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್, ನಗರ ಕಾಂಗ್ರೆಸ್ ಅಧ್ಯಕ್ಷ ವಿಕೆಎಂ ಅಶ್ರಫ್, ಪಟ್ಟಣ ಪಂಚಾಯತ್ ಸದಸ್ಯರಾದ ಹಸೈನಾರ್ ನೆಲ್ಲಿಗುಡ್ಡೆ, ಸುನೀತಾ ಕೋಟ್ಯಾನ್, ಲತಾವೇಣಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ರಹಿಮಾನ್ ಕುರುಂಬಳ, ಶಬೀರ್ ಅಹ್ಮದ್, ಬೂತ್ ಅಧ್ಯಕ್ಷ ವಾಹೀದ್, ಅಶೋಕ್ ಎನ್ ಎಸ್ ಡಿ, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಅಬ್ದುಲ್ ಖಾದಿರಿ ಬೊಬ್ಬೆಕೇರಿ, ವೀರಕಂಬ ಗ್ರಾಮ ಪಂಚಾಯತ್ ಸದಸ್ಯರಾದ ರಘು ಪೂಜಾರಿ, ಕೇಪು ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ಕರೀಂ ಕುದ್ದುಪದವು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *