Header Ads
Header Ads
Header Ads
Breaking News

ವಿಟ್ಲ ಪಟ್ಟಣ ಪಂಚಾಯಿತಿ ಶಾಲೆಗೆ ಸೇರಿದ ಖಾಸಗಿ ಭೂಮಿಯಲ್ಲಿ ರಸ್ತೆ ನಿರ್ಮಾಣ ವಿಠಲ ವಿದ್ಯಾ ಸಂಘದ ವಿಠಲ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಧರಣಿ

ವಿಟ್ಲ ಪಟ್ಟಣ ಪಂಚಾಯಿತಿ ಶಾಲೆಗೆ ಸೇರಿದ ಖಾಸಗಿ ಭೂಮಿಯಲ್ಲಿ ರಸ್ತೆ ನಿರ್ಮಾಣ ಮಾಡಿ ವಿದ್ಯಾ ಸಂಸ್ಥೆಗಳ ಕಲಿಕಾ ವಾತಾವರಣವನ್ನು ನಾಶಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ವಿಠಲ ವಿದ್ಯಾ ಸಂಘದ ವಿಠಲ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಸ್ತೆ ಇಳಿದು ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾತನಾಡಿದ ವಿಠಲ ವಿದ್ಯಾ ಸಂಘದ ಉಪಾಧ್ಯಕ್ಷ ಕೆ.ಶಿ.ವಿಶ್ವನಾಥ ವಿಟ್ಲ ಪಟ್ಟಣ ಪಂಚಾಯಿತಿ ಶಾಲಾ ಆಡಳಿತ ಮಂಡಳಿ ಗಮನಕ್ಕೆ ತರದೇ ಇಲ್ಲಿ ಬೈಪಾಸ್ ರಸ್ತ ನಿರ್ಮಿಸಲು ಮುಂದಾಗಿದ್ದು, ಅವರಿಗೆ ಮಾತನಾಡುವ ವಿವೇಚನೆ ಕೂಡ ಇಲ್ಲದಂತಾಗಿದೆ. ನಾವಿಂದ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಬಳಿಕ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಾಲಿನಿ ಹಾಗೂ ನಾಡಕಚೇರಿಯಲ್ಲಿ ಉಪತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್, ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ಉಪಪ್ರಾಂಶುಪಾಲ ಕಿರಣ್ ಕುಮಾರ್ ಬ್ರಹ್ಮಾವರ ಉಪಸ್ಥಿತರಿದ್ದರು.

Related posts

Leave a Reply