Breaking News

ವಿಟ್ಲ ಪೊಲೀಸ್ ಠಾಣೆಗೆ ಎಡಿಜಿಪಿ ಅಲೋಕ್ ಕುಮಾರ್ ಬೇಟಿ

ವಿಟ್ಲ: ವಿಟ್ಲ ಪರಿಸರದಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿರುವ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಅವರು ವಿಟ್ಲ ಪೊಲೀಸ್ ಠಾಣೆಗೆ ಬೇಟಿ ನೀಡಿ, ಕಡತಗಳನ್ನು ಪರಿಶೀಲಿಸಿದರು.
ಇಂದು ಸಂಜೆ ವೇಳೆಗೆ ಮಂಗಳೂರಿಗೆ ಆಗಮಿಸಿದ ಅವರು ನೇರವಾಗಿ ವಿಟ್ಲ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಬಳಿಕ ವಿಟ್ಲ ಪೊಲೀಸ್ ಠಾಣೆಯಲ್ಲಿ ಸುಮಾರು ೧ ತಾಸುಗಳ ವರೆಗೆ ಐಜಿಪಿ ಹರಿಶೇಖರನ್, ಜಿಲ್ಲಾ ಎಸ್.ಪಿ ಭೂಷಣ್ ರಾವ್ ಬೊರಸೆ ಅವರ ಜತೆ ಮಾತಕತೆ ನಡೆಸಿದರು. ಬಳಿಕ ಠಾಣೆಯಲ್ಲಿರುವ ವಿವಿಧ ಗಡಿಗುರುತುಗಳ ನಕ್ಷೆಗಳನ್ನು ವೀಕ್ಷಿಸಿದರು.
ಈ ಸಂದರ್ಭ ಹೆಚ್ಚುವರಿ ಎಸ್.ಪಿ ವೇದಮೂರ್ತಿ, ಬಂಟ್ವಾಳ ಡಿವೈ‌ಎಸ್‌ಪಿ ರವೀಶ್ ಸಿ.ಆರ್, ವೃತ್ತ ನಿರೀಕ್ಷಕ್ಷ ಮಂಜಯ್ಯ, ವಿಟ್ಲ ಎಸೈ ನಾಗರಾಜ್ ಮೊದಲಾದವರು ಇದ್ದರು.
ಬಳಿಕ ಮಾಧ್ಯಮದವರ ಜತೆ ಮಾತನಾಡಿದ ಅವರು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಲ್ಲಿ ಎಸ್.ಪಿ ಹಾಗೂ ಐಜಿ ಜತೆ ಮಾತುಕತೆ ನಡೆಸಲಾಗಿದೆ. ಪೊಲೀಸ್ ಇಲಾಖೆಯ ಅಧಿಕಾರಿಗಳು ಇದರಲ್ಲಿ ನಿರ್ಲಕ್ಷ್ಯ ವಹಿಸುವುದು ಕಂಡು ಬಂದರೆ ಅವರು ವಿರುದ್ಧ ಕ್ರಮ ಜರುಗಿಸುವಂತೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯನ್ನು ಭದ್ರಗೊಳಿಸಲಾಗಿದೆ. ಯಾವುದೇ ಅಹಿಕರ ನಡೆಯದಂತೆ ಅವರು ಕಾರ್ಯ ನಿರ್ವಹಿಸಲಿದ್ದಾರೆ. ಕಾನೂನು ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಬಾರೀ ವಿವಾದ ಎಬ್ಬಿಸಿದ್ದ ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಬ್ದುಲ್ ಜಲೀಲ್ ಹತ್ಯೆಯ ಬಳಿಕ ಜಲೀಲ್ ಅವರ ಮನೆಗೆ ಗೃಹ ಸಚಿವರು ಭೇಟಿ ನೀಡಿದ್ದರು. ಇದೀಗ ವಿಟ್ಲ ಠಾಣೆಗೆ ಎಡಿಜಿಪಿ ಭೇಟಿ ನೀಡಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಈ ಬಗ್ಗೆ ಉತ್ತರಿಸಿದ ಅವರು ನನ್ನ ಈ ಭೇಟಿ ವಿಶೇಷವೇನು ಇಲ್ಲ. ಕಲ್ಲಡ್ಕದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಅಹಿತಕರ ಘಟನೆ ಹಿನ್ನೆಲೆಯಲ್ಲ ಬಂಟ್ವಾಳ ಆಗಮಿಸಿದ್ದೇನೆ. ಅದೇ ಮಾರ್ಗದಲ್ಲಿರುವ ವಿಟ್ಲ ಠಾಣೆಗೆ ಆಗಮಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.

Related posts

Leave a Reply