Header Ads
Breaking News

ವಿಟ್ಲ ಪ.ಪಂ ಘನತ್ಯಾಜ್ಯ ವಿಲೇವಾರಿ ಘಟಕದ ಕಾಮಗಾರಿಗಳಿಗೆ ಚಾಲನೆ

ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪಳಿಕೆ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸ್ವಚ್ಛಭಾರತ ಮಿಷನ್ ಯೋಜನೆಯಡಿಯಲ್ಲಿ 2.10 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ವಿವಿಧ ಕಾಮಗಾರಿಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಶಿಲಾನ್ಯಾಸ ನೇರವೇರಿಸಿದರು. ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಶಾಸಕರು, ಸ್ವಚ್ಛ ಭಾರತ ಕಲ್ಪನೆಯಂತೆ ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರು ಸ್ವಚ್ಛ ಭಾರತ ಮಿಷನ್‍ನ್ನು ಜಾರಿಗೆ ತಂದಿದ್ದಾರೆ. ಇದರ ಮೂಲಕ ಸ್ವಚ್ಛತೆಗೆ ವಿಶೇಷ ಅನುದಾನ ನಿ ೀಡಲಾಗುತ್ತಿದೆ. ಪರಿಸರ ಸ್ವಚ್ಛವಾಗಿದ್ದರೆ ಆರೋಗ್ಯ ಪೂರ್ಣ ಸಮಾಜ ನಿರ್ಮಾಣಗೊಳ್ಳುತ್ತದೆ ಎಂದು ಹೇಳಿದರು. ವಿಟ್ಲ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ್ದು, ನಿರಂತರ ಅಭಿವೃದ್ಧಿ ಹೊಂದುತ್ತಿದೆ. ಇಲ್ಲಿಯ ಮೂಲಭೂತ ಉದ್ದೇಶಕ್ಕೆ ಅನುದಾನ ಬಿಡುಗಡೆಗೊಳಿಸಲು ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದ್ದೇನೆ. ವಿಟ್ಲ ತಾಲ್ಲೂಕು ಕೇಂದ್ರ ಅಥವಾ ಪುರಸಭೆಯಾಗಿ ಮೇಲ್ದರ್ಜೆಗೇರುವ ಉದ್ದೇಶದಿಂದ ಕಾಯಕಲ್ಪ ಇಟ್ಟುಕೊಳ್ಳಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಮುಂದಿನ ದಿನಗಳಲ್ಲಿ ಸುಸಜ್ಜಿತ ಕಾರ್ಯಾಲಯಕ್ಕೆ ಅನುದಾನ ಒದಗಿಸುವ ಮೂಲಕ ಅಭಿವೃದ್ಧಿಪಡಿಸಲಾಗುವುದು ಎಂದರು. ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ದಮಯಂತಿ, ಉಪಾಧ್ಯಕ್ಷ ಜಯಂತ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ಉಷಾ ಕೃಷ್ಣಪ್ಪ, ಸದಸ್ಯರಾದ ಅರುಣ್ ಎಂ ವಿಟ್ಲ, ಅಶೋಕ್ ಕುಮಾರ್ ಶೆಟ್ಟಿ, ರಾಮ್‍ದಾಸ್ ಶೆಣೈ, ಶ್ರೀಕೃಷ್ಣ, ರವಿಪ್ರಕಾಶ್, ಮಂಜುನಾಥ ಕಲ್ಲಕಟ್ಟ, ಲೋಕನಾಥ ಶೆಟ್ಟಿ ಕೊಲ್ಯ, ಚಂದ್ರಕಾಂತಿ, ಲತಾವೇಣಿ, ಇಂದಿತಾ ಅಡ್ಯಾಳಿ, ಸುನೀತಾ ಕೋಟ್ಯಾನ್, ಮುಖ್ಯಾಧಿಕಾರಿ ಮಾಲಿನಿ, ಕಂದಾಯ ನಿರೀಕ್ಷಕ ಪಕೀರ ಮೂಲ್ಯ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *