Header Ads
Header Ads
Breaking News

ವಿಟ್ಲ: ಮಟ್ಕಾ ಅಡ್ಡೆ ಮೇಲೆ ದಾಳಿ, ಆರೋಪಿಗಳ ಸೆರೆ

ವಿಟ್ಲ ಠಾಣಾ ವ್ಯಾಪ್ತಿಯ ಎರಡು ಕಡೆಗಳಲ್ಲಿ ನಡೆಯುತ್ತಿದ್ದ ಮಟ್ಕಾ ಅಡ್ಡೆ ಮೇಲೆ ದಾಳಿ ನಡೆಸಿದ ವಿಟ್ಲ ಎಸ್‌ಐ ನೇತೃತ್ವದ ತಂಡ ಇಬ್ಬರು ಆರೋಪಿಗಳನ್ನು ಹಾಗೂ ನಗದನ್ನು ವಶಪಡಿಸಿಕೊಂಡ ಘಟನೆ ಗುರುವಾರ ಬೆಳಿಗ್ಗೆ ಹಾಗೂ ಮಧ್ಯಾಹ್ನ ನಡೆದಿದೆ.ಪುಣಚ ಗ್ರಾಮದ ತೋರಣಕಟ್ಟೆ ಎಂಬಲ್ಲಿ ಅಂಗಡಿಯಲ್ಲಿ ಮಟ್ಕಾ ದಂಧೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಿಟ್ಲ ಎಸ್‌ಐ ಯಲ್ಲಪ್ಪ ಹಾಗೂ ಸಿಬ್ಬಂದಿಗಳ ತಂಡ ದಾಳಿ ನಡೆಸಿ, ಪುಣಚ ಗ್ರಾಮದ ಅಜೇರು ನಿವಾಸಿ ಇಂತ್ರು ಡಿಸೋಜ(35) ಎಂಬಾತನನ್ನು ಬಂಧಿಸಿ ಆತನಿಂದ 3ಸಾವಿರ ರೂ. ನಗದು ವಶಪಡಿಸಿಕೊಂಡಿದ್ದಾರೆ.

ಕೇಪು ಗ್ರಾಮದ ಮೂಡಂಬೈಲು ಎಂಬಲ್ಲಿಯ ಅಂಗಡಿಯೊಂದರಲ್ಲಿ ಮಟ್ಕಾ ದಂಧೆ ನಡೆಸುತ್ತಿದ್ದ ಸ್ಥಳಕ್ಕೂ ದಾಳಿ ನಡೆಸಿದ ವಿಟ್ಲ ಎಸ್‌ಐ ನೇತೃತ್ವದ ತಂಡ ಮೂಡಂಬೈಲು ನಿವಾಸಿ ಶಂಕರ ಪಾಟಾಲಿ ಎಂಬಾತನನ್ನು ಬಂಧಿಸಿ, ಆತನಿಂದ 2700 ರೂ. ನಗದು ವಶಪಡಿಸಕೊಂಡಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.

Related posts

Leave a Reply