Header Ads
Header Ads
Breaking News

ವಿದ್ಯಾನಿಧಿ, ಆರೋಗ್ಯ ನಿಧಿ, ಸಾಮಾಜಿಕ ನಿಧಿ ವಿತರಣೆ. ಸೆ.9ರಂದು ಕುದ್ರೋಳಿ ಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮ. ಸುದ್ದಿಗೋಷ್ಠಿಯಲ್ಲಿ ಕೋಶಾಧಿಕಾರಿ ಪದ್ಮರಾಜ್ ಮಾಹಿತಿ.

 

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪ್ರಸ್ತುತ ವರ್ಷದಿಂದ ನೀಡಲಾಗುತ್ತಿರುವ ವಿದ್ಯಾನಿಧಿ, ಆರೋಗ್ಯ ನಿಧಿ, ಸಾಮಾಜಿಕ ನಿಧಿ ವಿತರಣಾ ಕಾರ್ಯಕ್ರಮವು ಸೆಪ್ಟಂಬರ್ ೯ರಂದು ಗೋಕರ್ಣನಾಥ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಕೋಶಾಧಿಕಾರಿ ಪದ್ಮರಾಜ್ ತಿಳಿಸಿದರು.ಈ ಬಗ್ಗೆ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿ, ಕಾರ್ಯಕ್ರಮವು ಮಾಜಿ ಕೇಂದ್ರ ಸಚಿವ ಕ್ಷೇತ್ರದ ನವೀಕರಣದ ರೂವಾರಿ ಬಿ. ಜನಾರ್ದನ ಪೂಜಾರಿ ನೇತೃತ್ವದಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಉದ್ಘಾಟಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರದ ಅಧ್ಯಕ್ಷ ಹೆಚ್.ಎಸ್. ಸಾಯಿರಾಂ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ನಾನಾ ಕ್ಷೇತ್ರದ ಗಣ್ಯರು, ದಾನಿಗಳು ದೇವಳದ ಆಡಳಿತ ಮಂಡಳಿ ಸದಸ್ಯರು ಅಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿರುವರು. ಈ ಸಂದರ್ಭ ಮಾಧ್ಯಮಗೋಷ್ಟಿಯಲ್ಲಿ ಡಾ. ಅನುಸೂಯ, ಬಿ.ಜಿ. ಸುವರ್ಣ, ವಿ.ಕೆ ತಾರನಾಥ್ ಉಪಸ್ಥಿತರಿದ್ದು.

Related posts

Leave a Reply