Header Ads
Header Ads
Breaking News

ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಖಂಡಿಸಿ ಸುಳ್ಯದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಪುತ್ತೂರಿನ ಕಾಲೇಜು ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ವಿದ್ಯಾರ್ಥಿ ಸಂಘಟನೆ ಎಬಿವಿಪಿಯ ಸದಸ್ಯರು ಭಾಗಿಯಾಗಿದ್ದಾರೆ ಎಂಬುಂದು ಎಲ್ಲರಿಗೂ ತಿಳಿದ ವಿಚಾರ. ಈ ಕಾರಣಕ್ಕಾಗಿ ಬಿಜೆಪಿಯ ಅಥವಾ ಸಂಘ ಪರಿವಾರದ ಯಾವ ನಾಯಕರು ಮಾತನಾಡುತ್ತಿಲ್ಲ. ಆರ್.ಎಸ್.ಎಸ್. ಮತ್ತು ಬಿಜೆಪಿಗೆ ತಾಕತ್ತಿದ್ದರೆ ಪುತ್ತೂರು ಘಟನೆಯಲ್ಲಿ ಭಾಗಿಯಾದ ಎ.ಬಿ.ವಿ.ಪಿ. ಸಂಘಟನೆಯನ್ನು ಬ್ಯಾನ್ ಮಾಡಲಿ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ. ವೆಂಕಪ್ಪ ಗೌಡ ಆಗ್ರಹಿಸಿದ್ರು. ಅವರು ಪುತ್ತೂರಿನ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಖಂಡಿಸಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಮತ್ತು ಇತರ ಘಟಕಗಳ ವತಿಯಿಂದ ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ ಚುನಾವಣೆಗೆ ಮುಂಚೆ ಬಿಜೆಪಿಯವರು ವಾಟ್ಸಾಪ್ ಸಂದೇಶದಲ್ಲಿ ಮಾತೆಯರಿಗೆ ರಕ್ಷಣೆ ದೊರಕಲು, ಗೋವುಗಳು ಹಟ್ಟಿಸೇರಲು, ಕಾಲೇಜು ವಿದ್ಯಾರ್ಥಿನಿಯರು ಮನೆ ಸೇರಲು ಬಿಜೆಪಿಗೆ ಮತ ನೀಡಿ ಎಂದು ಪ್ರಚಾರ ಮಾಡಿದ್ದರು. ಬಿಜೆಪಿಗೆ ಮತವನ್ನೂ ಕೊಟ್ಟರು. ಅಧಿಕಾರಕ್ಕೂ ತಂದರು. ಈಗ ನಾವು ಪ್ರಶ್ನೆ ಮಾಡಬೇಕಾಗಿದೆ. ಗೋವುಗಳು ಹಟ್ಟಿ ಸೇರುತ್ತಿದೆಯಾ? ಕಾಲೇಜು ವಿದ್ಯಾರ್ಥಿನಿ ಸೇಫ್ ಆಗಿ ಮನೆ ಸೇರಿದ್ದಾಳಾ? ಎಂದು ಪ್ರಶ್ನಿಸಿದರು. ಸಮಾಜ ಕಲ್ಯಾಣ ಮಂಡಳಿ ಮಾಜಿ ಅಧ್ಯಕ್ಷೆ ದಿವ್ಯ ಪ್ರಭಾ ಚಿಲ್ತಡ್ಕ, ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಎಂ.ಬಿ. ಸದಾಶಿವ, ತಾಲೂಕು ಜನಜಾಗೃತಿ ಅಧ್ಯಕ್ಷ ಕಳಂಜ ವಿಶ್ವನಾಥ ರೈ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದೀಕ್ ಕೊಕ್ಕೋ, ಕಾಂಗ್ರೆಸ್ ವಕ್ತಾರ ನಂದರಾಜ ಸಂಕೇಶ, ಸಾಮಾಜಿಕ ಜಾಲತಾಣ ಮುಖ್ಯಸ್ಥ ಹರಿಪ್ರಸಾದ್ ಕೆ.ಕೆ. ಮೊದಲಾದವರು ಉಪಸ್ಥಿತರಿದ್ರು.

Related posts

Leave a Reply

Your email address will not be published. Required fields are marked *