Header Ads
Breaking News

ವಿದ್ಯಾರ್ಥಿ ವೇತನ ಮಂಜೂರಾತಿಯಲ್ಲಿ ಸರ್ಕಾರದಿಂದ ವಿಳಂಬ ನೀತಿ : ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದ.ಕ. ಜಿಲ್ಲಾ ಸಮಿತಿ ಆರೋಪ

ವಿದ್ಯಾರ್ಥಿವೇತನ ಮಂಜೂರಾತಿಯಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ. ಸ್ಕಾಲರ್‍ಶಿಪ್‍ನಲ್ಲಿ ಉಂಟಾಗಿರುವ ಅವ್ಯವಸ್ಥೆಯಿಂದ ರಾಜ್ಯದ ಹಲವು ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದಾರೆ. ಇದು ಶಿಕ್ಷಣ ಮತ್ತು ವಿದ್ಯಾರ್ಥಿಗಳ ಮೇಲೆ ಸರ್ಕಾರಕ್ಕಿರುವ ಬೇಜವಾಬ್ದಾರಿತನವಾಗಿದೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಆರೋಪಿಸಿದೆ.

ಈ ಬಗ್ಗೆ ಮಂಗಳೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ದ.ಕ. ಜಿಲ್ಲಾಧ್ಯಕ್ಷ ಸಿರಾಜ್, ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲಾ-ಕಾಲೇಜುಗಳು ಇನ್ನೇನು ಆರಂಭಗೊಳ್ಳಲಿದೆ. ಕೊರೊನಾದ ಪರಿಣಾಮದಿಂದ ಜನರ ಆರ್ಥಿಕ ಸ್ಥಿತಿಗತಿಯ ತೀರಾ ಹದಗೆಟ್ಟಿರುವುದರಿಂದ ಪೆÇೀಷಕರು ತಮ್ಮ ಮಕ್ಕಳ ಅಡ್ಮಿಶನ್ ಫೀಸ್ ಕಟ್ಟಲು ಪರದಾಡುತ್ತಿದ್ದಾರೆ.

ಇನ್ನೊಂದು ಕಡೆ ಶಿಕ್ಷಣ ಸಂಸ್ಥೆಗಳು ಕೂಡ ಅಡ್ಮಿಶನ್ ಫೀಸ್ ಹೆಚ್ಚಿಸಿರುವುದಲ್ಲದೇ ಒಂದೇ ಕಂತಿನಲ್ಲಿ ಎಲ್ಲಾ ಶುಲ್ಕವನ್ನು ಕಟ್ಟಲು ಒತ್ತಾಯಿಸುವ ಮೂಲಕ ಪೆÇೀಷಕರಿಗೆ ಗಾಯದ ಮೇಲೆ ಬರೆದಿದ್ದಾರೆ. ಆದರೆ ಸರಕಾರವು ಈ ಬಗ್ಗೆ ಒಂದು ಮಾರ್ಗಸೂಚಿಯನ್ನು ತರಲು ವಿಫಲವಾಗಿದೆ. ವಿದ್ಯಾರ್ಥಿವೇತನದಲ್ಲಿ ಉಂಟಾಗಿರುವ ಅವ್ಯವಸ್ಥೆಯಿಂದ ರಾಜ್ಯದ ಹಲವು ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಪ್ರತಿ ಬಾರಿ ಸರ್ಕಾರ ಮತ್ತು ಅಲ್ಪಸಂಖ್ಯಾತ ಇಲಾಖೆಯ ಸ್ಕಾಲರ್ಶಿಪ್ ವಿಚಾರದಲ್ಲಿ ವ್ಯವಸ್ಥಿತವಾಗಿ ನಡೆಸಿಕೊಂಡು ಬರುವುದರಲ್ಲಿ ವಿಫಲವಾಗಿದೆ. ಮತ್ತು ವಿದ್ಯಾರ್ಥಿಗಳ ಮೇಲೆ ಸರಕಾರವೇ ಕಾರಣವಾಗಿದೆ ಎಂದು ಆರೋಪಿಸಿದರು.

 

Related posts

Leave a Reply

Your email address will not be published. Required fields are marked *