
ದೇಶದ ಪ್ರಮುಖ ವಿದ್ವಾಂಸರದಲ್ಲಿ ಒಬ್ಬರೆನಿಸಿಕೊಂಡಿದ್ದಂತ ಬನ್ನಂಜೆ ಗೋವಿಂದಾಚಾರ್ಯರು ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.
ಇಂತಹ ಉಡುಪಿ ಜಿಲ್ಲೆಯ ಡಾ. ಬನ್ನಂಜೆ ಗೋವಿಂದಾಚಾರ್ಯ(85) ಇಂದು ತಮ್ಮ ಸ್ವಗೃಹ ಅಂಬಲಪಾಡಿಯಲ್ಲಿ ಬೆಳಗ್ಗೆ 11 ಗಂಟೆಗೆ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ 1936ರಲ್ಲಿ ಗೋವಿಂದಾಚಾರ್ಯರು ಜನಿಸಿದ್ದರು. ತಮ್ಮ ಪ್ರವಚನಗಳ ಮೂಲಕ ತತ್ವ ಪ್ರಚಾರ ಕೈಗೊಂಡಿದ್ದರು. ಮಾಧ್ವ ತತ್ವದಲ್ಲಿ ಅಮೋಘ ಪಾ0ಡಿತ್ಯ ಸಾಧಿಸಿರುವ ಇವರು ಅನೇಕ ಕೃತಿಗಳನ್ನು ರಚಿಸಿದ್ದರು. ಕನ್ನಡ ಹಾಗೂ ಸಂಸ್ಕೃತ ಭಾಷೆಯಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದಾರೆ. ಅನೇಕ ಸಂಸ್ಕೃತ ಕೃತಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಬಾಣಭಟ್ಟನ ಕಾದಂಬರಿ,ಕಾಳೀದಾಸನ ಶಾಕುಂತಲಾ, ಶೂದ್ರಕನ ‘ಮೃಚ್ಛಕಟಿಕ’ ಇತ್ಯಾದಿ ಚಾರಿತ್ರಿಕ ಕೃತಿಗಳು ಇವರ ಅನುವಾದಿತ ಕೃತಿಗಳಲ್ಲಿ ಪ್ರಮುಖವಾದುವು. ಮಾತ್ರವಲ್ಲದೆ ಚಲನಚಿತ್ರ ಲೋಕಕ್ಕೂ ಬನ್ನಂಜೆಯವರು ಕೆಲಸ ಮಾಡಿದ್ದಾರೆ. ಜಿ.ವಿ. ಅಯ್ಯರ್ ಅವರ ಸಂಸ್ಕೃತ ಚಲನಚಿತ್ರ ‘ಶ್ರೀ ಶಂಕರಾಚಾರ್ಯ’, ‘ಶ್ರೀ ಮಧ್ವಾಚಾರ್ಯ’, ‘ಶ್ರೀ ರಾಮಾನುಜಾಚಾರ್ಯ’ ಚಲನಚಿತ್ರಗಳಿಗೆ ಸಂಪನ್ಮೂಲ ವ್ಯಕ್ತಿಯಾಗಿ ಕೆಲಸ ನಿರ್ವಹಿಸಿದ್ದಲ್ಲದೆ, ಸಂಭಾಷಣೆಯನ್ನು ರಚಿಸಿದ್ದಾರೆ. ಇವರು ಕನ್ನಡದ ಖ್ಯಾತ ನಟ ವಿಷ್ಣುವರ್ಧನರ ಆಧ್ಯಾತ್ಮಿಕ ಗುರುವಾಗಿದ್ದರು.