Header Ads
Header Ads
Breaking News

ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಹಿನ್ನೆಲೆ: ಜೂನ್ 12ರಂದು ಅಭಿನಂದನಾ ಸಮಾರಂಭ

ಬಂಟ್ವಾಳ: ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಜೂನ್ 12ರಂದು ಮಂಗಳವಾರ ಬ್ರಹ್ಮರಕೂಟ್ಲುವಿನಲ್ಲಿರುವ ಬಂಟವಾಳ ಬಂಟರ ಭವನದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭವು ನಡೆಯಲಿದ್ದು, ರಾಜ್ಯಮಟ್ಟದ ನಾಯಕರು ಭಾಗಿಯಾಗಲಿದ್ದಾರೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿ ಬಿ.ಸಿ.ರೋಡಿನ ಪಕ್ಷದ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬೆಳಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಬಿಜೆಪಿಯಿಂದ ಆಯ್ಕೆಗೊಂಡ ಕರಾವಳಿಯ ಎಲ್ಲ ಶಾಸಕರು, ಪಕ್ಷ ಪ್ರಮುಖರಾದ ಸಿ.ಟಿ.ರವಿ ಮೊದಲಾದವರು ಭಾಗವಹಿಸುವರು ಎಂದರು. ಸುಮಾರು ೫ರಿಂದ ೬ ಸಾವಿರ ಪೇಜ್ ಪ್ರಮುಖರು ಇದರಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ. ಪಕ್ಷದ ಗೆಲುವಿಗೆ ಕಾರ್ಯಕರ್ತರ ಕೊಡುಗೆಯನ್ನು ಗಮನಿಸಿ ಈ ಬೃಹತ್ ಸಮಾರಂಭವನ್ನು ಆಯೋಜಿಸಲಾಗಿದ್ದು, ಕಾರ್ಯಕರ್ತರನ್ನು ಈ ಸಂದರ್ಭ ಗೌರವಿಸಲಾಗುವುದು ಎಂದು ಅವರು ಹೇಳಿದರು.
ಬಿ.ಸಿ.ರೋಡಿನ ಸಾಮರ್ಥ್ಯ ಸೌಧದಲ್ಲಿ ಜೂನ್ ೨೨ರಂದು ಶಾಸಕರ ಕಚೇರಿ ಕಾರ್ಯಾರಂಭವಾಗಲಿದೆ. ಈಗ ನೀತಿಸಂಹಿತೆ ಜಾರಿಯಲ್ಲಿದ್ದ ಕಾರಣ ಅಧಿಕಾರಿಗಳ ಮಟ್ಟದ ಸಭೆಗಳನ್ನು ಏರ್ಪಡಿಸದೇ ಇದ್ದರೂ ಕ್ಷೇತ್ರಾದ್ಯಂತ ಸಂಚರಿಸಿ ಜನರ ಸಮಸ್ಯೆಗಳನ್ನು ಆಲಿಸುತ್ತಿದ್ದೇನೆ ಎಂದು ರಾಜೇಶ್ ನಾಕ್ ಹೇಳಿದರು.
ಈ ಸಂದರ್ಭ ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ರಾಜ್ಯ ಸಹವಕ್ತಾರೆ ಸುಲೋಚನಾ ಜಿ.ಕೆ.ಭಟ್, ಜಿಪಂ ಸದಸ್ಯ ತುಂಗಪ್ಪ ಬಂಗೇರ, ಜಿಲ್ಲಾ ವಕ್ತಾರ ಕೆ.ಹರಿಕೃಷ್ಣ ಬಂಟ್ವಾಳ್ ಹಾಜರಿದ್ದರು.
ವರದಿ: ಸಂದೀಪ್ ಬಂಟ್ವಾಳ

Related posts

Leave a Reply