Header Ads
Header Ads
Breaking News

ವಿಧಾನ ಪರಿಷತ್‌ನ ಸಭಾಪತಿಯಾಗಿ ಪ್ರತಾಪ್‌ಚಂದ್ರ ಶೆಟ್ಟಿ ಆವಿರೋಧ ಆಯ್ಕೆ : ಇಂದು ವಿಧಾನ ಪರಿಷತ್‌ನಲ್ಲಿ ಸಭಾಪತಿಯಾಗಿ ಅಧಿಕಾರ ಸ್ವೀಕಾರ

ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ವಿಧಾನ ಪರಿಷತ್‌ನ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನ ಹಿರಿಯ ಸದಸ್ಯ ಪ್ರತಾಪ್‌ಚಂದ್ರ ಶೆಟ್ಟಿ ನಾಮಪತ್ರ ಸಲ್ಲಿಸಿದ್ದಾರೆ. ಆ ಮೂಲಕ ಜೆಡಿಎಸ್‌ನಿಂದ ಸಭಾಪತಿ ಸ್ಥಾನವನ್ನು ವಶಪಡಿಸಿಕೊಳ್ಳುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಪ್ರತಾಪ್‌ಚಂದ್ರ ಶೆಟ್ಟಿ ಒಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

4 ಬಾರಿ ಕುಂದಾಪುರ ಕ್ಷೇತ್ರದ ಶಾಸಕರಾಗಿ, 3 ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿರುವ ಪ್ರತಾಪ್‌ಚಂದ್ರ ಶೆಟ್ಟಿ, ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್‌ನ ಹಿರಿಯ ಸದಸ್ಯರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರ ಹಿರಿತನಕ್ಕೆ ಅವಕಾಶ ದೊರಕಿಸಿಕೊಡಲು ಅಚ್ಚರಿ ಎನ್ನುವಂತೆ ಅವರನ್ನು ಸಭಾಪತಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕರು ಅಭಿಪ್ರಾಯ ಪಟ್ಟಿದ್ದಾರೆ. ಮಿತ್ರ ಪಕ್ಷಗಳಲ್ಲಿ ಮೇಲ್ಮನೆ ಸಭಾಪತಿ ಸ್ಥಾನ ತನಗೇ ಬೇಕೆಂದು ಹಠ ಹಿಡಿದಿದ್ದ ಜೆಡಿಎಸ್, ಒಂದು ಹಂತದಲ್ಲಿ ಮೃದು ಧೋರಣೆ ತಾಳಿದೆ.

39 ಸದಸ್ಯರ ಸಂಖ್ಯೆ ಹೊಂದಿರುವ ಕಾಂಗ್ರೆಸ್, 14 ಸದಸ್ಯರನ್ನು ಹೊಂದಿರುವ ಜೆಡಿಎಸ್‌ಗೆ ಅವಕಾಶ ಕಲ್ಪಿಸಿಕೊಡುವುದರಿಂದ ಪಕ್ಷ ಎಲ್ಲ ವಿಷಯದಲ್ಲಿಯೂ ಜೆಡಿಎಸ್ ಮುಂ?ದೆ ಶರಣಾದಂತೆ ಆಗುತ್ತದೆ. ಹೀಗಾಗಿ, ಯಾವುದೇ ಕಾರಣಕ್ಕೂ ಸಭಾಪತಿ ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟು ಕೊಡಬಾರದು ಎಂದು ಕಾಂಗ್ರೆಸ್ ಪಕ್ಷದ ನಾಯಕರ ಮೇಲೆ ಒತ್ತಡ ಹೇರಿದ್ದರು ಎನ್ನಲಾಗಿದೆ. ಇಂದು ವಿಧಾನ ಪರಿಷತ್‌ನಲ್ಲಿ ಸಭಾಪತಿಯಾಗಿ ಆಧಿಕಾರ ಸ್ವೀಕಾರ ಮಾಡಿದರು.

Related posts

Leave a Reply