
ನಿತ್ಯೋತ್ಸವ ಸಾಮಾಜಿಕ ಮತ್ತು ಸಾಂಸ್ಕøತಿಕ ಸಂಘ (ರಿ) ವತಿಯಿಂದ ವಿಧುಷಿ ದೀಪ್ತಿ ಬಿ ಅವರಿಗೆ ನಾಟ್ಯ ಸರಸ್ವತಿ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನ ಜೆ.ಸಿ ರಸ್ತೆಯ ರವೀಂದ್ರ ಕಲಾ ಕ್ಷೇತ್ರ ಕನ್ನಡಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಇವರು ಸುಮಾರು 20 ವರ್ಷಗಳಿಂದ ಪುತ್ತೂರಿನ ಶ್ರೀ ಶಾರದಾ ಕಲಾ ಶಾಲೆ (ರಿ) ನ ಗುರುಗಳಾದ ವಿದ್ವಾನ್ ಸುದರ್ಶನ್ ಎಂ.ಎಲ್ ಭಟ್ ಹಾಗೂ ವಿದುಷಿ ಸುಮ ರಾಮಪ್ರಸಾದ್ ಬೆಂಗಳೂರು ಇವರ ಶಿಷ್ಯೆ. ಪುತ್ತೂರು ತಾಲೂಕಿನ ಕುಂಬ್ರದಲ್ಲಿ ಈಗಾಗಲೇ ನೃತ್ಯ ತರಗತಿಯನ್ನು ನಡೆಸುತ್ತಾ ಹಲವು ಶಿಷ್ಯ ಬಳಗವನ್ನು ಹೊಂದಿದ್ದಾರೆ. ರಾಜ್ಯ ಹೊರರಾಜ್ಯಗಳಲ್ಲಿ ಭರತನಾಟ್ಯ ಪ್ರದರ್ಶನವನ್ನು ನೀಡಿರುತ್ತಾರೆ. ಹಲವು ಸಂಘ ಸಂಸ್ಥೆಗಳು ನಡೆಸುವ ಭರತನಾಟ್ಯ ಸ್ಪರ್ಧೆಯಲ್ಲಿ ತೀರ್ಪುಗಾರರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಹಾಗೂ ಕರ್ನಾಟಕ ಪರೀಕ್ಷಾ ಮಂಡಳಿ ನಡೆಸುವ ಭರತನಾಟ್ಯ ಪರೀಕ್ಷೆಯಲ್ಲಿ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದ ಇವರು ಈಗಾಗಲೇ ರಜತ ಶ್ರೀ ಪ್ರಶಸ್ತಿಯನ್ನು ಪಡೆದಿದ್ದಾರೆ.