Header Ads
Breaking News

ವಿಮಾನ ನಿಲ್ದಾನಕ್ಕೆ ಕೋಟಿ ಚೆನ್ನಯ್ಯ ಹೆಸರಿಡಲು ಆಗ್ರಹ-ನಾಳೆ ಮತ್ತೊಂದು ಸುತ್ತಿನ ಹೋರಾಟಕ್ಕೆ ಕಾಂಗ್ರೆಸ್ ಸಿದ್ಧತೆ

ಮಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅದಾನಿ ನಾಮಕರಣ ಮಾಡಿರುವುದಕ್ಕೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದು ಮೂರನೇ ಸುತ್ತಿನ ಹೋರಾಟಕ್ಕೆ ಇಳಿದಿದ್ದಾರೆ. ಈ ಬಗ್ಗೆ ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರು, ಮಂಗಳೂರು ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರರಾದ ಕೋಟಿ-ಚೆನ್ನಯರ ಹೆಸರಿಡಬೇಕು ಎಂದು ಒತ್ತಾಯಿಸಿದರು. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಖಾಸಗಿ ಕಂಪೆನಿಗೆ ಗುತ್ತಿಗೆ ನೀಡಿದ್ದರೂ ಅದರ ಹೆಸರು ಬದಲಾವಣೆ ಮಾಡಿಲ್ಲ. ಅದೇ ರೀತಿ ಗುಜರಾತ್, ಮುಂಬಯಿ ವಿಮಾನ ನಿಲ್ದಾಣಗಳ ಹೆಸರನ್ನು ಬದಲಾಯಿಸಿ ಗುತ್ತಿಗೆ ಕಂಪೆನಿಯ ಹೆಸರನ್ನು ಸೂಚಿಸಿಲ್ಲ. ಆದರೆ ಮಂಗಳೂರು ವಿಮಾನ ನಿಲ್ದಾಣದ ಹೆಸರನ್ನು ಮಾತ್ರ ಏಕೆ ಬದಲಾಯಿಸಲಾಗಿದೆ. ಈ ಬಗ್ಗೆ ಇಲ್ಲಿನ ಸಂಸದರು ತಮ್ಮ ಇಚ್ಛಾ ಶಕ್ತಿಯನ್ನು ಪ್ರದರ್ಶಿಸಬೇಕಾಗಿತ್ತು ಎಂದರು.

ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ಶ್ರೀನಿವಾಸ ಮಲ್ಯರ ಪ್ರಯತ್ನದ ಫಲವಾಗಿ ದ.ಕ. ಜಿಲ್ಲೆಗೆ ಲಭಿಸಿರುವ ವಿಮಾನ ನಿಲ್ದಾಣಕ್ಕೆ ಯಾವ ಕೊಡುಗೆಯನ್ನು ನೀಡದ ಅದಾನಿಯ ಹೆಸರನ್ನು ಇಟ್ಟಿರುವುದು ಜಿಲ್ಲೆಯ ಜನರಿಗೆ ಮಾಡುತ್ತಿರುವ ಅಪಮಾನ ಮತ್ತು ನಾಚಿಗೇಡಿನ ಸಂಗತಿಯಾಗಿದೆ. ಆ ಮೂಲಕ ತುಳುನಾಡೆಂದು ಕರೆಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸವನ್ನು ಮರೆಮಾಚಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಸದಾಶಿವ ಉಳ್ಳಾಲ್, ವಸಂತ್ ಬೆರ್ನಾರ್ಡ್, ಪಿಯೂಸ್ ಮೊದಲಾದವರು ಉಪಸ್ಥಿತರಿದ್ದರು.

ವರದಿ: ಶರತ್ ಮಂಗಳೂರು

Related posts

Leave a Reply

Your email address will not be published. Required fields are marked *