Header Ads
Breaking News

ವಿರಾಟ್ ಹಿಂದೂ ಸಮಾಜೋತ್ಸವ ಮಾರ್ಚ್ 15ರಂದು ನಡೆಯಲಿರುವ ಕಾರ್ಯಕ್ರಮ

ವಿಟ್ಲ: ವಿಟ್ಲ ಪ್ರಖಂಡ ವಿಶ್ವ ಹಿಂದು ಪರಿಷತ್, ಬಜರಂಗದಳ ವತಿಯಿಂದ “ವಿರಾಟ್ ಹಿಂದೂ ಸಮಾಜೋತ್ಸವ” ಮಾರ್ಚ್ 15ರಂದು ವಿಟ್ಲದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ರಥದ ಗದ್ದೆಯಲ್ಲಿ ನಡೆಯಲಿದ್ದು, ಸಂಸದೆ ಸಾಧ್ವೀ ಪ್ರಜ್ಞಾಸಿಂಗ್ ಠಾಕೂರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಸಮಾಜೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪದ್ಮನಾಭ ಕಟ್ಟೆ ತಿಳಿಸಿದರು.

ಅವರು ವಿಟ್ಲದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಧ್ಯಾಹ್ನ 2.30ಕ್ಕೆ ವಿಟ್ಲದ ನಾಲ್ಕು ದಿಕ್ಕುಗಳಿಂದ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಬಳಿಕ ನಡೆಯುವ ಧರ್ಮ ಜಾಗೃತಿ ಸಮಾವೇಶದಲ್ಲಿ ಆರ್‍ಎಸ್‍ಎಸ್ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಧ್ವೀ ಪ್ರಜ್ಞಾಸಿಂಗ್ ಠಾಕೂರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಪ್ರಧಾನ ಅಭ್ಯಾಗತರಾಗಿ ಬಜರಂಗದಳದ ರಾಷ್ಟ್ರೀಯ ಸಂಯೋಜಕ ಸೋಹನ್ ಸಿಂಗ್ ಸೋಲಂಕಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಉಡುಪಿ ಪೇಜಾವರ ಅಧೋಕ್ಷಜ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ, ಶ್ರೀಧಾಮ ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಗುರುಪು ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಕಣಿಯೂರು ಚಾಮುಂಡೇಶ್ವರಿ ಕ್ಷೇತ್ರದ ಮಹಾಬಲ ಸ್ವಾಮೀಜಿ, ಬಾಳೆಕೋಡಿ ಶಿಲಾಂಜನ ಕ್ಷೇತ್ರದ ಶಶಿಕಾಂತ ಮಣಿ ಸ್ವಾಮೀಜಿ, ಬಾಯಾರು ಶ್ರೀ ಕಾಳಿಕಾಂಬ ಮಠದ ಕಾಳಿಕಾತನಯ ಶ್ರೀ ಉಮಾ ಮಹೇಶ್ವರ ತೀರ್ಥರು ಗೌರವ ಉಪಸ್ಥಿತಿ ಇರಲಿದ್ದಾರೆ.

ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ. ಕೃಷ್ಣ ಪ್ರಸನ್ನ ಅವರು ಕಾರ್ಯಕ್ರಮದ ಉದ್ದೇಶದ ಕುರಿತು ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ಹಿಂದು ಸಮಾಜೋತ್ಸವ ಸಮಿತಿ ಅಧ್ಯಕ್ಷ ಹರೀಶ್ ನಾಯಕ್ ವಿಟ್ಲ, ಪ್ರಧಾನ ಕಾರ್ಯದರ್ಶಿ ಅಕ್ಷಯ್ ರಜಪೂತ್, ಕಾರ್ಯದರ್ಶಿ ದಯಾನಂದ ಶೆಟ್ಟಿ ಉಜಿರೆಮಾರ್, ನರಸಿಂಹ ಶೆಟ್ಟಿ ಮಾಣಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *