Header Ads
Breaking News

ವಿವಿಧ ವೆಚ್ಚದ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ ಸಮಾರಂಭ : ಒಟ್ಟು 7 ಕೋಟಿ 5 ಲಕ್ಷ ರೂಪಾಯಿ ವೆಚ್ಚದ ವಿವಿಧ ಕಾಮಗಾರಿ

ವಿಟ್ಲದ ಕರೋಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 7 ಕೋಟಿ 5 ಲಕ್ಷ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಸಮಾರಂಭ ನಡೆಯಿತು. ಕಮ್ಮಾಜೆಯಿಂದ ಶ್ರೀ ಗುರುದೇವ ಸಂಸ್ಥಾನ ಒಡಿಯೂರು ರಸ್ತೆಗೆ ಶಿಲಾನ್ಯಾಸ ನೆರವೇರಿಸಿ, ಆಶೀರ್ವಚನ ನೀಡಿದ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಗ್ರಾಮದ ವಿಕಾಸವಾದರೆ ರಸ್ತೆ ಅಭಿವೃದ್ಧಿಯಾಗಬೇಕು, ರಸ್ತೆ ಅಭಿವೃದ್ಧಿಯಾದರೆ ಗ್ರಾಮ ಅಭಿಯಾಗುತ್ತದೆ, ಆದರೆ ರಸ್ತೆಯ ಅವಶ್ಯಕತೆಗಳಿರುವುದನ್ನು ಗುರುತಿಸಿ ಪೂರಕವಾದ ಯೋಜನೆ ರೂಪಿಸಿದಾಗ ಗ್ರಾಮದ ಅಭಿವೃದ್ಧಿ ಜೊತೆಗೆ ರಾಷ್ಟ್ರದ ಅಭಿವೃದ್ಧಿಯಾಗುತ್ತದೆ ಎಂದು ಅವರು ಹೇಳಿದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾತನಾಡಿ ಗ್ರಾಮದ ಅಭಿವೃದ್ಧಿ ಸರಕಾರದ ಮೂಲಮಂತ್ರವಾಗಿದ್ದು ಗ್ರಾಮದ ಜನರ ಬೇಡಿಕೆಯನ್ನು ಹಂತಹಂತವಾಗಿ ಈಡೇರಿಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಬಂಟ್ವಾಳ ಬೂಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಕೊಳ್ನಾಡು ಮಹಾ ಶಕ್ತಿ ಕೇಂದ್ರ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಪ್ರಧಾನ ಕಾರ್ಯ ದರ್ಶಿ ರವೀಶ್ ಶೆಟ್ಟಿ ಕರ್ಕಳ, ಕರೋಪಾಡಿ ಗ್ರಾಮ ಪಂಚಾಯಿ ಮಾಜಿ ಆಧ್ಯಕ್ಷೆ ಬೇಬಿ ಆರ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *