Header Ads
Breaking News

ವಿವಿ ಕಾಲೇಜಿನಲ್ಲಿ ಸಾಂಪ್ರದಾಯಿಕ ಕ್ರೀಡಾಕೂಟ

ವಿಶ್ವವಿದ್ಯಾನಿಲಯ ಕಾಲೇಜಿನ ಕ್ರೀಡಾ ವಿಭಾಗ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಸಾಂಪ್ರದಾಯಿಕ ಕ್ರೀಡಾಕೂಟ, ಗ್ರಾಮೀಣ ಮಹಿಳಾ ಕ್ರೀಡಾಕೂಟ ಹಾಗೂ ಕುಸ್ತಿ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಕಾಲೇಜಿನ ರವೀಂದ್ರ ಕಲಾ ಭವನವದಲ್ಲಿ ಹಮ್ಮಿಕೊಂಡಿತ್ತು.ಕಾರ್ಯಕ್ರಮವನ್ನು ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಂ ಆರ್ ಬಲ್ಲಾಳ್ ಉದ್ಘಾಟಿಸಿದರು.

ಲಗೋರಿ, ಅಡಿಕೆ ಹಾಳೆ ರೇಸ್, ಕಬಡ್ಡಿ, ಮಡಕೆ ಒಡೆಯುವುದು ಸೇರಿದಂತೆ ಹಲವು ಸಾಂಪ್ರದಾಯಿಕ ಕ್ರೀಡಾಸ್ಪರ್ಧೆಗಳು ಜರುಗಿದವು. ಮಹಿಳಾ ಕ್ರೀಡಾಕೂಟದ ಅಂಗವಾಗಿ ವಾಲಿಬಾಲ್ ಮೊದಲಾದ ಸ್ಪರ್ಧೆಗಳನ್ನು ನಡೆಸಲಾಯಿತು. ಕುಸ್ತಿ ತರಬೇತಿ ಶಿಬಿರವನ್ನು ಸಾಂಪ್ರದಾಯಿಕವಾಗಿ ಉದ್ಘಾಟಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ. ಉದಯ್ ಕುಮಾರ್ ಎಂ.ಎ, ಅವರು ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿ ಮಂಗಳೂರು ವಿಶ್ವವಿದ್ಯಾನಿಲಯ ಕ್ರೀಡಾ ವಿಭಾಗದ ನಿರ್ದೇಶಕ ಪ್ರೊ. ಕಿಶೋರ್ ಕುಮಾರ್ ಸಿ.ಕೆ, ಸಂಸ್ಕೃತ ವಿಭಾಗದ ಡಾ. ಕುಮಾರ ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕಿ ಸುರೇಖಾ, ಕ್ರೀಡಾ ಕಾರ್ಯದರ್ಶಿಗಳಾದ ಪ್ರಮಿತ್ ಕುಮಾರ್, ಹರ್ಷಿಕಾ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *