Header Ads
Breaking News

ದೇರಳಕಟ್ಟೆ ನಿಟ್ಟೆ ಆಸ್ಪತ್ರೆಯ ಚಿಂತನ ಸಭಾಂಗಣದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ

ದೇರಳಕಟ್ಟೆಯ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯ ಇದರ ರಾಷ್ಟ್ರೀಯ ಸೇವಾ ಯೋಜನೆ, ಪೋಲೀಸ್ ಇಲಾಖೆಯ ದಕ್ಷಿಣ ಉಪವಿಭಾಗ ಹಾಗೂ ಬ್ಲಡ್ ಬ್ಯಾಂಕ್ ಆಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ದೇರಳಕಟ್ಟೆ ನಿಟ್ಟೆ ಆಸ್ಪತ್ರೆಯ ಚಿಂತನ ಸಭಾಂಗಣದಲ್ಲಿ ನಡೆಯಿತು.
ಸಹಾಯಕ ಪೋಲೀಸ್ ಆಯುಕ್ತ ರಾಮರಾವ್ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ರಕ್ತದ ಆವಶ್ಯಕತೆಯನ್ನು ಮನಗಂಡು ರಕ್ತದಾನದಲ್ಲಿ ಎಲ್ಲರೂ ತೊಡಗಿಸುಕೊಳ್ಳುವುದು ಹಾಗೂ ಜಾಗೃತಿ ಮೂಡಿಸುವಂತಹ ಕಾರ್ಯ ಪ್ರಸ್ತುತ ಕಾಲದಲ್ಲಿ ಅಗತ್ಯ ಎಂದು ಹೇಳಿದರು.

ಕ್ಷೇಮ ಡೀನ್ ಡಾ. ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ರಕ್ತ ಮಾರುಕಟ್ಟೆಯಲ್ಲಿ ದೊರೆಯುವಂತದ್ದಲ್ಲ, ದಾನದಿಂದಲೇ ನೀಡಬೇಕಾಗಿದೆ. ಜೀವನ ಉಳಿಸಲು ನೀಡುವ ಉಡುಗೊರೆಯಾಗಿರುತ್ತದೆ. ಹಿಂದೆ ವೈದ್ಯರು, ಸಿಬ್ಬಂದಿ ರಕ್ತ ಒದಗಿಸುವಂತಹ ವಾತಾವರಣ ವಿತ್ತು. ಈಗ ಕಾಲ ಬದಲಾವಣೆಯಾಗಿದೆ. ರಕ್ತದ ಬಣ್ಣ ಒಂದೇ ಬೇಧವಿಲ್ಲದೆ ಎಲ್ಲರೂ ಮಾಡಬೇಕಾದ ಮಹತ್ಕಾರ್ಯ ಎಂದರು. 
ಈ ವೇಳೆ 24 ವರ್ಷಗಳಿಂದ ರಕ್ತದಾನ ಶಿಬಿರ, ಆರೋಗ್ಯ ಶಿಬಿರವನ್ನು ನಡೆಸಿಕೊಂಡು ಬರುತ್ತಿರುವ, ರಾಜ್ಯ ಪ್ರಶಸ್ತಿ ಪುರಸ್ಕೃತ ಫರಂಗಿಪೇಟೆ ಸೇವಾಂಜಲಿ ಪ್ರತಷ್ಠಾನದ ಟ್ರಸ್ಟೀ ಕೃಷ್ಣ ಕುಮಾರ್ ಪೂಂಜ ಅವರನ್ನು ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ಅವರು ಕಾರ್ಯಕರ್ತರೆಲ್ಲರ ಸೇವಾ ಮನೋಭಾವದಿಂದ ಕೂಡಿರುವುದರಿಂದ 24 ವರ್ಷಗಳಿಂದ ರಕ್ತದಾನ ಶಿಬಿರಗಳನ್ನು ಆಯೋಜಿಸಲು ಸಾಧ್ಯವಾಗಿದೆ. ದ.ಕ ಜಿಲ್ಲೆಯಲ್ಲಿ ರಕ್ತದ ಕೊರತೆ ನಿರ್ಮಾಣವಾಗಿದೆ. ಎ??ಎಸ್ ಎಸ್ ಕಾರ್ಯಕರ್ತರು ಇತರರಿಗೆ ಮಾದರಿಯಾಗಿ ಕೆಲಸ ಮಾಡುತ್ತಿದ್ದಾರೆ. ದೂರದಿಂದ ಬರುವ ಮಂದಿ ಗೆ ಆಸ್ಪತ್ರೆಯಲ್ಲಿ ವಿದ್ಯಾ ರ್ಥಿಗಳು ರಕ್ತ ಒದಗಿ ಸುವಂತಹ ಕಾರ್ಯ ಮಾನವೀಯತೆಯನ್ನು ಮೈಗೂಡಿಸಿಕೊಳ್ಳಲು ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ನಿಟ್ಟೆ ವಿ.ವಿ ಜೊತೆಗೆ ಪೊಲೀಸ್ ಇಲಾಖೆ ಸೇರಿಕೊಂಡು ನಡೆಸಿದ ರಕ್ತದಾನ ಕಾರ್ಯ ಶ್ಲಾಘನೀಯ ಎಂದರು.
ಪೊಲೀಸ್ ಇಲಾಖೆಯ ದಕ್ಷಿಣ ಉಪವಿಭಾಗದ ಸುಮಾರು 21ಕ್ಕೂ ಅಧಿಕ ಪೊಲೀಸರು ಹಾಗೂ ನಿಟ್ಟೆ ವಿ.ವಿ ಯ ಎನ್ ಎಸ್ ಎಸ್ ವಿದ್ಯಾರ್ಥಿಗಳು ರಕ್ತದಾನ ನಡೆಸುವ ಮೂಲಕ ಮಾದರಿಯಾದರು.

ಕೊಣಾಜೆ ಠಾಣಾಧಿಕಾರಿ ರವಿ ನಾಯ್ಕ್, ಕ್ಷೇಮ ಸಹ ಡೀನ್ ಡಾ.ಜೆ.ಪಿ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು. ವೈದ್ಯಕೀಯ ಅಧೀಕ್ಷಕ ಶಿವಕುಮಾರ್ ಹಿರೇಮಠ್ , ಡಾ.ಸುಮಲತಾ , ಯಶೋದಾ , ಶಶಿ ಕುಮಾರ್ ಶೆಟ್ಟಿ, ಸಾರ್ವಜನಿಕ ಸಂಪರ್ಕ ಅಧಿಕಾರಿ ಹೇಮಂತ್ ಶೆಟ್ಟಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *