Header Ads
Header Ads
Breaking News

ವಿ4 ನ್ಯೂಸ್ ಆಡಳಿತ ನಿರ್ದೇಶಕ ಲಕ್ಷ್ಮಣ್ ಕುಂದರ್ ಸಹಿತ 18 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ವಿ೪ನ್ಯೂಸ್‌ನ ಆಡಳಿತ ನಿರ್ದೇಶಕ ಲಕ್ಷ್ಮಣ್ ಕುಂದರ್ ರಿಗೆ 2018ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಲಕ್ಷ್ಮಣ್ ಕುಂದರ್ ಸಹಿತ ವಿವಿಧ ಕ್ಷೇತ್ರದಲ್ಲಿ ಸಲ್ಲಿಸಿದ 18 ಮಂದಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಇದರ ಜೊತೆಗೆ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ದಿನಕರ ಇಂದಾಜೆ ಅವರಿಗೂ ಪ್ರಶಸ್ತಿ ಲಭಿಸಿದೆ. ನವೆಂಬರ್ 1ರಂದು ಮಂಗಳೂರು ನೆಹರೂ ಮೈದಾನದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ವೇಳೆ ಹಲವು ಮಂದಿ ಗಣ್ಯರು ಸಾಕ್ಷಿಯಾಗಲಿದ್ದಾರೆ.

Related posts

Leave a Reply