Header Ads
Breaking News

ವೆನ್ಲಾಕ್ ಆಸ್ಪತ್ರೆಯಲ್ಲಿ ಕೊರೊನಾ ಪ್ರಕರಣಗಳಿಗೆ ಪ್ರತ್ಯೇಕ ಕೊಠಡಿ : ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕಿ ಡಾ. ರಾಜೇಶ್ವರಿ ದೇವಿ ಸ್ಪಷ್ಟನೆ

ವೆನ್ಲಾಕ್ ಆಸ್ಪತ್ರೆಯಲ್ಲಿ ಕೊರೋನ ಸಂಶಯಾಸ್ಪದ ಪ್ರಕರಣಗಳಿಗೆ 8 ವಿಶೇಷ, ಪ್ರತ್ಯೇಕ ಕೊಠಡಿಗಳನ್ನು ಕಾದಿರಿಸಲಾಗಿದೆ ಎಂದು ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರು ತಿಳಿಸಿದ್ದಾರೆ.

ಸಂಶಯಾಸ್ಪದ ಪ್ರಕರಣಗಳು ಬಂದರೆ, ಅಂತಹ ರೋಗಿಗಳನ್ನು ಈ ಕೊಠಡಿಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಬ್ಬೊಬ್ಬರನ್ನು ಒಂದೊಂದು ಕೊಠಡಿಗೆ ಕಾದಿರಿಸಿ ದಾಖಲಿಸಲಾಗುತ್ತಿದೆ. ಅವರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುತ್ತಿದೆ. ಪರೀಕ್ಷೆ ನೆಗೆಟಿವ್ ಬಂದರೆ ಅವರಿಗೆ 14 ದಿನಗಳ ನಿಗಾವಣೆಯಲ್ಲಿರಲು ಸೂಚನೆ ನೀಡಿ ಮನೆಗೆ ಕಳುಹಿಸಲಾಗುತ್ತಿದೆ. ಪೊಸಿಟಿವ್ ಬಂದರೆ, ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗದರ್ಶಿಯಂತೆ ಚಿಕಿತ್ಸೆ ಕೊಡಲಾಗುತ್ತದೆ. ಇದಕ್ಕಾಗಿ ಜಿಲ್ಲಾಧಿಕಾರಿಗಳ ಆದೇಶದಂತೆ, ವೆನ್ಲಾಕ್ ನಲ್ಲಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ವಿಶೇಷವಾದ ಪ್ರತ್ಯೇಕ ಕೊಠಡಿಗಳಲ್ಲಿ ಈ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರತೀ ರೋಗಿಗೂ ಎಲ್ಲ ರೀತಿಯ ಜೈವಿಕ ಮೆಡಿಕಲ್ ವ್ಯವಸ್ಥೆ ಕಲ್ಪಿಸಿ, ಇಲಾಖೆಯ ಮಾರ್ಗಸೂಚಿಗಳಂತೆ ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ವೆನ್ಲಾಕ್ ಆಸ್ಪತ್ರೆಯಲ್ಲಿ ಕೋವಿಡ್ 19 ಬಗ್ಗೆ ಜಾಗೃತಿ, ಮಾಹಿತಿ ನೀಡಲು ಅಲ್ಲಲ್ಲಿ ಹೆಲ್ಪ್ ಡೆಸ್ಕ್ ಸ್ಥಾಪಿಸಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೆನ್ಲಾಕ್ ಆಸ್ಪತ್ರೆಯ ಬಗ್ಗೆ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಸೈಬರ್ ಪೊಲೀಸ್ ರಿಗೆ ಹಾಗೂ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಲಾಗುತ್ತಿದೆ ಎಂದು ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರು ತಿಳಿಸಿದ್ದಾರೆ.

Related posts

Leave a Reply

Your email address will not be published. Required fields are marked *