Header Ads
Breaking News

ವೆನ್‍ಲಾಕ್ ಆಸ್ಪತ್ರೆಗೆ ಸಂಸದ ನಳಿನ್ ತುರ್ತು ಭೇಟಿ : ಸಂಸದರಿಗೆ ಸೂಕ್ತ ಮಾಹಿತಿ ನೀಡಿದ ಜಿಲ್ಲಾಧಿಕಾರಿ

ಕೊರೊನಾ ವೈರಸ್ ಬಗ್ಗೆ ಜನರಲ್ಲಿ ಹೆಚ್ಚುತ್ತಿರುವ ಆತಂಕದ ನಡುವೆಯೂ ಸಾಮಾಜಿಕ ಜಾಲತಾಣಗಳಲ್ಲಿ ಮಂಗಳೂರಿನಲ್ಲಿರುವ ಜಿಲ್ಲಾ ಸರಕಾರಿ ಆಸ್ಪತ್ರೆ ವೆನಲಾಕ್ ಬಗ್ಗೆ ಅಪಪ್ರಚಾರ ನಡೆಸಿರುವ ಬೆನ್ನಲ್ಲೇ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ಕೊಟ್ಟಿದ್ದಾರೆ.

ನಳಿನ್ ಕುಮಾರ್ ಕಟೀಲ್ ಅವರು ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ, ಆಸ್ಪತ್ರೆಯ ಅಧೀಕ್ಷಕಿ ಸಹಿತ ವಿವಿಧ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಸಮಾಲೋಚನೆ ನಡೆಸಿದರು. ಸಂಸದರಿಗೆ ಸೂಕ್ತ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರು ಕರೋನಾ ಚಿಕಿತ್ಸೆಗಾಗಿ ಪ್ರತ್ಯೇಕ ಬ್ಲಾಕ್ ವ್ಯವಸ್ಥೆ ಮಾಡಿರುವುದನ್ನು ನಳಿನ್ ಕುಮಾರ್ ಕಟೀಲ್ ಅವರ ಗಮನಕ್ಕೆ ತಂದರು. ಒಬ್ಬ ವ್ಯಕ್ತಿಯಲ್ಲಿ ಮಾತ್ರ ಕರೋನಾ ಪಾಸಿಟಿವ್ ಪತ್ತೆಯಾಗಿದ್ದು ಮತ್ತು ಇನ್ನೊಬ್ಬ ಕೊರೊನಾ ಶಂಕಿತ ವ್ಯಕ್ತಿಯನ್ನು ತೀವ್ರ ನಿಗಾದಲ್ಲಿ ಇಡಲಾಗಿದೆ. ಸುಮಾರು 200 ಜನರನ್ನು ತೀವ್ರ ನಿಗಾ ಘಟಕದಲ್ಲಿ ಇಡುವ ವ್ಯವಸ್ಥೆ ಇದೆ. ಆದ್ದರಿಂದ ಜನರು ಭಯಭೀತರಾಗುವ ಅವಶ್ಯಕತೆ ಇಲ್ಲ ಎಂದು ಮಾಹಿತಿ ನೀಡಿದರು.

ಸಂಸದರ ನಳಿನ್ ಕುಮಾರ್ ಕಟೀಲ್ ಅವರು, ಜನರು ಊಹಾಪಪೊಹಗಳನ್ನು ನಂಬದಂತೆ, ಜಿಲ್ಲಾಡಳಿತ, ರಾಜ್ಯ, ರಾಷ್ಟ್ರ ಸಂಪೂರ್ಣವಾಗಿ ಜನರ ಆರೋಗ್ಯ ಕಾಳಜಿಗೆ ಕಟಿಬದ್ಧವಾಗಿದೆ ಎಂದು ನಳಿನ್ ಕುಮಾರ್ ಜನರಿಗೆ ತಿಳಿಸಿದ್ದಾರೆ. ಇನ್ನು ಸಂಸದರು ಕೋವಿಡ್ ಚಿಕಿತ್ಸೆಗೆ ಸಿದ್ಧಗೊಳಿಸಿರುವ ಆಯುಷ್ ಕಟ್ಟಡದಲ್ಲಿ ಸಿದ್ಧತೆಗಳನ್ನು ಪರಿಶೀಲಿಸಿದರು

Related posts

Leave a Reply

Your email address will not be published. Required fields are marked *