Header Ads
Breaking News

ವೇತನ ವಂಚಿತ ಶಿಕ್ಷಕರಿಗೆ ಆರ್ಥಿಕ ಸಹಾಯ ನೀಡಲಿ : ಅಭಿಷೇಕ್ ಉಳ್ಳಾಲ್ ಮನವಿ

ಕೋವಿಡ್ ಹಿನ್ನೆಲೆಯಲ್ಲಿ ಶಿಕ್ಷಕರು, ಉಪಾನ್ಯಾಸಕರು ವೇತನವಿಲ್ಲದೆ ದುಡಿಯುವಂತಾಗಿದ್ದು, ತಮ್ಮ ಕುಟುಂಬ ನಿರ್ವಹಣೆಗಾಗಿ ಸಾಲ ಮಾಡವ ಪರಿಸ್ಥಿತಿ ಬಂದಿದೆ. ಯಾರೆಲ್ಲ ವೇತನದಿಂದ ವಂಚಿತರಾಗಿದ್ದಾರೊ ಅವರಿಗೆ ಸರ್ಕಾರ ತಕ್ಷಣ ತಿಂಗಳಿಗೆ 10 ಸಾವಿರ ರೂ.ನಂತೆ ಆರ್ಥಿಕ ಸಹಾಯ ನೀಡಬೇಕು ಎಂದು ಮಂಗಳೂರು ವಿವಿ ಶೈಕ್ಷಣಿಕ ಪರಿಷತ್ ಮಾಜಿ ಸದಸ್ಯ ಅಭಿಷೇಕ್ ಉಳ್ಳಾಲ್ ಮನವಿ ಮಾಡಿದ್ದಾರೆ.

ಸರ್ಕಾರ ಕಾರ್ಮಿಕರಿಗೂ ಕನಿಷ್ಠ ವೇತನ ನಿಗದಿಪಡಿಸಿದೆ. ಆದರೆ ಮಕ್ಕಳನ್ನು ಉತ್ತಮ ಪ್ರಜೆಗಳಾಗಿ ಸಮಾಜಕ್ಕೆ ನೀಡುವ ಶಿಕ್ಷಕರಿಗೆ ಕನಿಷ್ಠ ವೇತನ ನಿಗದಿ ಪಡಿಸದೆ ನಿರ್ಲಕ್ಷ ವಹಿಸಿದೆ. ಆದ್ದರಿಂದ ಸರ್ಕಾರ ಶೈಕ್ಷಣಿಕ ತಜ್ಞರ ಸಮಿತಿಯೊಂದನ್ನು ರಚಿಸಿ ಅವರಿಂದ ಶಿಕ್ಷಕರ ಸಮಸ್ಯೆಗಳ ಕುರಿತು ಮಾಹಿತಿ ಪಡೆಯಬೇಕು. ಕನಿಷ್ಠ ವೇತನ ನೀಡುವ ನಿಟ್ಟಿನಲ್ಲಿ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಬೇಕು. ಹಲವು ಶಿಕ್ಷಣ ಸಂಸ್ಥೆಗಳು ಶೇ.50, 70ರಷ್ಟು ವೇತನ ಪಾವತಿಸುತ್ತಿದೆ. ಕೋವಿಡ್ ಕಾರಣ ನೀಡಿ ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದು ಕಾಲೇಜು ವಿಭಾಗದ ಎಲ್ಲ ಶಿಕ್ಷಕರನ್ನು ಕೆಲಸದಿಂದ ತೆಗೆದಿದೆ ಎಂದವರು ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಂಗಳೂರು ವಿವಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಶರತ್ ಕುಮಾರ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *