Header Ads
Header Ads
Breaking News

ವೈಭವದ ಮಂಗಳೂರು ದಸಾರಕ್ಕೆ ಅದ್ದೂರಿ ತೆರೆ

ಕಳೆದ 10 ದಿನಗಳಿಂದ ನಡೆಯುತ್ತಿದ್ದ ವೈಭವದ ಮಂಗಳೂರು ದಸರಾಕ್ಕೆ ಅದ್ಧೂರಿಯ ತೆರೆಬಿದ್ದಿದೆ. ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಶಾರದೆ, ಗಣಪತಿ ಸಹಿತ ನವದುರ್ಗೆಯರ ಮೂರ್ತಿಗಳ ವಿಸರ್ಜನಾ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು. ವಿವಿಧ ಕಲಾತಂಡಗಳು, ಟ್ಯಾಬ್ಲೋಗಳ ಮೂಲಕ ಸಾಗಿದ ಶೋಭಾಯಾತ್ರೆಯನ್ನು ಸಾವಿರಾರು ಮಂದಿ ಕಣ್ತುಂಬಿಕೊಂಡರು. ವಿಶ್ವವಿಖ್ಯಾತ ಮಂಗಳೂರು ದಸರಾಕ್ಕೆ ವೈಭವದ ತೆರೆ ಬಿದ್ದಿದೆ. ಕಳೆದ 10 ದಿನಗಳಿಂದ ನಡೆಯುತ್ತಿದ್ದ ಮಂಗಳೂರು ದಸರಾಕ್ಕೆ ಅದ್ಧೂರಿಯ ತೆರೆ ಬಿದ್ದಿದೆ. ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ನಡೆಯುತ್ತಿದ್ದ ಶಾರದಾ ಸಹಿತ ನವದುರ್ಗೆಯರ ವಿಗ್ರಹಗಳ ವಿಸರ್ಜನಾ ಶೋಭಾಯಾತ್ರೆಯು ಶುಕ್ರವಾರ ವಿಜೃಂಭಣೆಯಿಂದ ಜರುಗಿತು.


ಶುಕ್ರವಾರ ಸಂಜೆ4 ಗಂಟೆಗೆ ವಿಸರ್ಜನಾ ಶೋಭಾಯಾತ್ರೆಗೆ ಕುದ್ರೋಳಿ ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು. ಜಾತಿ, ಮತ, ಧರ್ಮಗಳ ಭೇದವಿಲ್ಲದೆ ಸಾವಿರಾರು ಮಂದಿ ಶೋಭಾಯಾತ್ರೆಯಲ್ಲಿ ಭಾಗವಹಿಸುವ ಮೂಲಕ ನಾವೆಲ್ಲರೂ ಒಂದೇ ಎನ್ನುವ ಸಂದೇಶ ಸಾರಿದರು. ಮಂಗಳೂರಿನ ಕುದ್ರೋಳಿ ಕ್ಷೇತ್ರದಿಂದ ಆರಂಭಗೊಂಡ ವಿಸರ್ಜನಾ ಮೆರವಣಿಗೆಗೆ ಕುದ್ರೋಳಿ ಕ್ಷೇತ್ರದ ರೂವಾರಿ ಬಿ.ಜನಾರ್ದನ ಪೂಜಾರಿ ಅವರು ಚಾಲನೆ ನೀಡಿದರು. ಗಣಪತಿ ದೇವರಿಗೆ ಪೂಜೆ ಸಲ್ಲಿಸುವ ಮೂಲಕ ವಿಸರ್ಜನಾ ಶೋಭಾಯಾತ್ರೆಗೆ ಚಾಲನೆ ನೀಡಲಾಯಿತು. ಬಳಿಕ ಶಾರದಾ ಮಾತೆಗೆ ಪೂಜೆ ಸಲ್ಲಿಸಿ ಶೋಭಾಯಾತ್ರೆ ಆರಂಭಗೊಂಡಿತು. ಕುದ್ರೋಳಿ ಕ್ಷೇತ್ರದಿಂದ ಹೊರಟ ಮೆರವಣಿಗೆಯು ಕಂಬ್ಳ ರಸ್ತೆ, ಮಣ್ಣಗುಡ್ಡ ಮಾರ್ಗವಾಗಿ ಲೇಡಿಹಿಲ್ ಸರ್ಕಲ್ ಲಾಲ್‌ಬಾಗ್, ಬಳ್ಳಾಲ್ ಬಾಗ್, ಪಿವಿಎಸ್ ಸರ್ಕಲ್, ನವಭಾರತ್ ಸಕಲ್, ಕೆ.ಎಸ್. ರಾವ್ ರಸ್ತೆ, ಹಂಪನಕಟ್ಟೆ, ಗಣಪತಿ ಹೈಸ್ಕೂಲ್ ರಸ್ತೆಯ ಮೂಲಕ ಸಾಗಿ, ಕಾರ್‌ಸ್ಟ್ರೀಟ್ ವೆಂಕಟರಮಣ ದೇವಸ್ಥಾನ ಮುಂಭಾಗದಿಂದ ಹಾದು, ಅಳಕೆ ಮೂಲಕ ಮತ್ತೆ ಕುದ್ರೋಳಿ ಕ್ಷೇತ್ರಕ್ಕೆ ತೆರಳಿ, ಕುದ್ರೋಳಿ ದೇವಾಲಯದ ಕೆರೆಯಲ್ಲಿ ವಿಗ್ರಹಗಳನ್ನು ಜಲಸ್ಥಂಭನಗೊಳಿಸಲಾಯಿತು.

Related posts

Leave a Reply