Header Ads
Header Ads
Breaking News

ವೈಯಕ್ತಿಕ ಟೀಕೆಗಳಿಗೆ ಪ್ರತಿಕ್ರಿಯೆ ನೀಡಲಾರೆ: ಕುಮಾರ ಬಂಗಾರಪ್ಪ ಹೇಳಿಕೆಗೆ ಸಿಎಂ ತಿರುಗೇಟು

ಕುಂದಾಪುರ: ಬಂಗಾರಪ್ಪನವರು ಎರಡೂ ಪಕ್ಷದ ನಾಯಕರಾಗಿದ್ದವರು. ಅವರು ಮಾಡಿರುವ ಸಾಧನೆಗಳನ್ನು ಹೇಳುವುದು ದುರುಪಯೋಗ ಆಗುವುದು ಹೇಗೆ. ಬಂಗಾರಪ್ಪನವರ ಹೆಸರು ದುರುಪಯೋಗಪಡಿಸಿಕೊಂಡು ಮತ ಕೇಳುವ ಅವಶ್ಯಕತೆ ನಮಗಿಲ್ಲ. ಕುಮಾರ ಬಂಗಾರಪ್ಪನವರೂ ಬಂಗಾರಪ್ಪನವರ ಸಾಧನೆಗಳನ್ನು ಹೇಳಿ ಪ್ರಚಾರ ನಡೆಸಲಿ. ಕುಮಾರ್ ಬಂಗಾರಪ್ಪನವರ ಕೊಡುಗೆ ಏನು ಎಂದು ಅವರು ಹೇಳಲಿ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

ತ್ರಾಸಿಯ ಕೊಂಕಣಿ ಖಾರ್ವಿ ಸಮಾಜ ಭವನದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಸಾಧನೆಯನ್ನು ಮುಂದಿಟ್ಟುಕೊಂಡು ಬಂಗಾರಪ್ಪನವರ ಹೆಸರನ್ನು ದುರುಪಯೋಗ ಪಡೆಸಿಕೊಳ್ಳುತ್ತಿದ್ದಾರೆ ಎಂದು ಶಾಸಕ ಕುಮಾರ ಬಂಗಾರಪ್ಪನವರ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದರು. ಕುಮಾರಬಂಗಾರಪ್ಪನವರ ಮೀ-ಟೂ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಕುಮಾರಸ್ವಾಮಿ ವೈಯಕ್ತಿಕ ಟೀಕೆಗಳಿಗೆ ನಾನು ಪ್ರತಿಕ್ರಿಯೆ ನೀಡುದಿಲ್ಲ.

ಇದು ಅವರ ನೈತಿಕತೆಯನ್ನು ನಡವಳಿಕೆಯನ್ನು ತೋರಿಸುತ್ತದೆ ಎಂದು ಆರೋಪಕ್ಕೆ ತಿರುಗೇಟು ನೀಡಿದರು.ಈ ಸಂದರ್ಭ ಮೀನುಗಾರಿಕಾ ಸಚಿವ ವೆಂಕಟರಾವ್ ನಾಡಗೌಡ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ವಿಧಾನಪರಿಷತ್ ಸದಸ್ಯ ಭೋಜೇಗೌಡ ಮತ್ತಿತರರು ಸುದ್ಧಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Related posts

Leave a Reply