Header Ads
Breaking News

ಶಕ್ತಿನಗರದ ಸಾನಿಧ್ಯ ಶಾಲೆಯಲ್ಲಿ ನಡೆದ ಓಣಂ ಆಚರಣೆ : ಪೊಲೀಸ್ ಆಯುಕ್ತ ಡಾ. ಹರ್ಷ ಅವರಿಂದ ಕಾರ್ಯಕ್ರಮ ಉದ್ಘಾಟನೆ

ಮಂಗಳೂರಿನ ಶಕ್ತಿನಗರದಲ್ಲಿರುವ ಸಾನಿಧ್ಯ ವಿಶೇಷ ಮಕ್ಕಳ ವಸತಿಯುತ ಶಾಲೆಯಲ್ಲಿ ಓಣಂ ಆಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಓಣಂ ಆಚರಣೆಯಲ್ಲಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನೆರೆದಿದ್ದವರನ್ನು ಮನರಂಜಿಸಿತು.
ಕಾರ್ಯಕ್ರಮದ ಮೊದಲಿಗೆ ವಿದ್ಯಾರ್ಥಿಗಳಿಂದ ಪ್ರಾರ್ಥನೆ ನೆರವೇರಿತು. ನಂತರ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಡಾ. ಹರ್ಷ ಅವರು ದೀಪ ಪ್ರಜ್ವಲನಗೊಳಿಸಿ ಉದ್ಘಾಟಿಸಿದರು. ಆನಂತರ ಮಾತನಾಡಿದ ಅವರು, ಈ ವಿದ್ಯಾಸಂಸ್ಥೆಯಲ್ಲಿ ಕೆಲಸಮಾಡುತ್ತಿರುವ ಶಿಕ್ಷಕರು ಪೂಜಾ ಕೈಕಂಕರ್ಯವನ್ನು ಮಾಡುತ್ತಿದ್ದಾರೆ. ಇಲ್ಲಿನ ಶಿಕ್ಷಕರು ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.
ಆನಂತರ ಸಾನಿಧ್ಯ ವಸತಿಯುತ ಶಾಲೆಯ ಆಡಳಿತಾಧಿಕಾರಿ ಡಾ. ವಸಂತ್ ಕುಮಾರ್ ಶೆಟ್ಟಿಯವರು ಪ್ರಸ್ತಾವಿಕವಾಗಿ ಮಾತನಾಡಿ, ಸಾನಿಧ್ಯ ಸಂಸ್ಥೆಯಲ್ಲಿ ಓಣಂ, ಕ್ರಿಸ್‌ಮಸ್, ದೀಪಾವಳಿ ಹಬ್ಬವನ್ನು

ಆಚರಿಸಕೊಂಡು ಬರುತ್ತದ್ದೇವೆ.

ಇಲ್ಲಿ ನರೆಯ ಕೇರಳ, ಆಂಧ್ರಪ್ರದೇಶದಿಂದ ಹಾಗೂ ಇತರ ರಾಜ್ಯದಿಂದ ಸೇರಿ ಒಟ್ಟು 165 ಭಿನ್ನ ಸಾಮರ್ಥ್ಯದ ಮಕ್ಕಳು ಅವರನ್ನು ಮುಖ್ಯವಾಹಿನಿಗೆ ತರಲು ೬೫ ಸಿಬ್ಬಂದಿ ವರ್ಗ ನಿರಂತರವಾಗಿ ತಮ್ಮ ಸೇವೆಯನ್ನು ನೀಡುತ್ತಾ ಬಂದಿದ್ದಾರೆ ಎಂದು ಹೇಳಿದರು. ಇದೇ ವೇಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಈ ಸಂದರ್ಭ ಶಾಲಿನಿ ಪಂಡಿತ್, ಮಾಧವ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *