Header Ads
Header Ads
Breaking News

ಶತಮಾನೋತ್ಸವ ಸಂಭ್ರಮದಲ್ಲಿದೆ ಸ.ಮಾ.ಹಿ.ಪ್ರಾ. ಶಾಲೆ ಚೆನ್ನೈತ್ತೋಡಿ

ಬಂಟ್ವಾಳ: ಬಂಟ್ವಾಳ ತಾಲೂಕಿನ ವಾಮದಪದವು ಪೇಟೆಯ ಹೃದಯಭಾಗದಲ್ಲಿರುವ ” ಉನ್ನತೀಕರಿಸಿದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಚೆನ್ನೈತ್ತೋಡಿ” ಶತಮಾನೋತ್ಸವ ಸಂಭ್ರಮದಲ್ಲಿದೆ. ಶಾಲಾಭಿವೃದ್ದಿಗೆ ಪೂರಕವಾದ ವಿವಿಧ ಅಭಿವೃದ್ಧಿ ಯೋಜನೆಗಳ ಅನುಷ್ಟಾನ, ಹಳೇ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಹಾಗೂ ಮಕ್ಕಳ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಡಿ.22 ರಂದು ಶತಮಾನ ಸಂಭ್ರಮವನ್ನು ಆಚರಿಸಲು ಉದ್ದೇಶಿಸಲಾಗಿದೆ ಎಂದು ಶಾಲೆಯ ದೈಹಿಕ ಶಿಕ್ಷಕ ಸಂತೋಷ್ ಕುಮಾರ್ ತಿಳಿಸಿದ್ದಾರೆ. ಸೋಮವಾರ ಬಿ.ಸಿ.ರೋಡಿನ ಪ್ರೆಸ್‌ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ವ್ಯಾಪಕ ಸಿದ್ದತೆಯನ್ನು ಮಾಡಲಾಗುತ್ತಿದೆ ಎಂದರು. ಇದೀಗ ಈ ಶಾಲೆಯು ಕ್ರೀಡೆ, ಸಾಮಾಜಿಕ, ಸಾಂಸ್ಕೃತಿಕ ಚಟುವಟಿಕಯ ಮೂಲಕ ಅತ್ಯುತ್ತಮ ಶಾಲೆಯಾಗಿ ಶೈಕ್ಷಣಿಕ ವಲಯದಲ್ಲಿ ಗುರುತಿಸಲ್ಪಟ್ಟಿದೆ.

ಪರಿಸರದ ಹಲವು ಗ್ರಾಮಗಳ ಮಕ್ಕಳ ಪಾಲಿಗೂ ಆಶಾ ಕಿರಣವಾಗಿದೆ. ಪ್ರಸಕ್ತ ಎಲ್‌ಕೆಜಿ, ಯುಕೆಜಿ ಕ್ಲಾಸ್ ಗಳನ್ನು ಆರಂಭಿಸಲಾಗಿದ್ದು1ರಿಂದ 8 ನೇ ತರಗತಿವರೆಗೆ294 ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿದ್ದಾರೆ.12ಮಂದಿ ಶಿಕ್ಷಕರಿದ್ದು, ಸದ್ಯ ಪೂರ್ಣಕಾಲಿಕ ಮುಖ್ಯ ಶಿಕ್ಷಕರ ಹುದ್ದೆ ಖಾಲಿ ಇದೆ ಎಂದರು. ಕ್ರೀಡಾಕೂಟ, ಸಾಂಸ್ಕೃತಿಕ ಪ್ರದರ್ಶನ, ಸಾಹಿತ್ಯ ಕಮ್ಮಟಗಳು, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ, ಗುರುವಂದನೆ ಮೊದಲಾದ ಕಾರ್ಯಕ್ರಮ ಈ ಸಂದರ್ಭ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದ ಅವರು ಶತಮಾನೋತ್ಸವದ ಸಂಭ್ರಮದ ಯಶಸ್ಸಿಗೆ ಶಾಸಕ ರಾಜೇಶ್ ನಾಕ್ ಅವರ ಗೌರವಾಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ಹಂಝ ಎ.ಬಸ್ತಿಕೋಡಿ, ಸಂಚಾಲಕ ನಾರಾಯಣ ಶೆಟ್ಟಿ ಪರಾರಿ, ಸಂಘಟನಾ ಕಾರ್ಯದರ್ಶಿ ಗೋಪಾಲ ಅಂಚನ್, ಜತೆ ಕಾರ್ಯದರ್ಶಿ ಪುರುಷೋತ್ತಮ ಶೆಟ್ಟಿ ಬಾರೆಕ್ಕಿನಡೆ, ಸೌಕತ್ ಆಲಿ ಮೊದಲಾದವರಿದ್ದರು.

Related posts

Leave a Reply