Header Ads
Breaking News

ಶಬರಿಮಲೆಯಲ್ಲಿ ಮಕರ ಸಂಕ್ರಮಣಕ್ಕೆ ಸಕಲ ಸಿದ್ಧತೆ

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳ ಕೇರಳದ ಪತ್ತನಂತಿಟ್ಟ ಜಿಲ್ಲೆಯ ಶಬರಿಮಲೆ ಅಯ್ಯಪ್ಪ ಸ್ವಾಮೀ ಸನ್ನಿಧಾನದಲ್ಲಿ ಮಕರ ಸಂಕ್ರಮಣ ದಿಪೋತ್ಸವ ಹಾಗೂ ಮಕರ ಜ್ಯೋತಿ ದರ್ಶನ ಬುಧವಾರ ನಡೆಯಲಿದೆ. ಸೋಮವಾರ ಭಾರಿ ಪೊಲೀಸ್ ಭದ್ರತೆಯೊಂದಿಗೆ ಪಂದಳ ಅರಮನೆಯಿಂದ ಶೋಭಾಯಾತ್ರೆಯ ಮೂಲಕ ಹೊರಟ ಅಯ್ಯಪ್ಪ ಸ್ವಾಮಿಯ ತಿರುವಾಭರಣಂ ಮೆರವಣಿಗೆ ಆರಂಭಗೊಂಡಿದ್ದು, ಮಕರ ಉತ್ಸವ ಪೂಜೆಯಂದು ಯೋಗಮುದ್ರೆಯಲ್ಲಿರುವ ಅಯ್ಯಪ್ಪ ಸ್ವಾಮಿಯ ವಿಗ್ರಹಕ್ಕೆ ತಿರುವಾಭರಣಗಳನ್ನು ತೊಡಿಸಿ ಪೂಜೆ ಮಾಡಲಾಗುತ್ತದೆ. ಜ.೧೨ವರೆಗೆ ಪಂದಳ ಅರಮನೆಯಲ್ಲಿ ಅಯ್ಯಪ್ಪ ಸ್ವಾಮಿಯ ತಿರುವಾಭರಣವನ್ನು ಭಕ್ತರ ದರ್ಶನಕ್ಕಾಗಿ ಇಡಲಾಗಿತ್ತು. ಬಳಿಕ ಸೋಮವಾರ ಪೂಜೆ, ವೈಧಿಕ ಕಾರ್ಯಕ್ರಮ ಮುಗಿದ ಬಳಿಕ ಮೆರವಣಿಗೆಯ ಮೂಲಕ ಶಬರಿಮಲೆ ಸನ್ನಿಧಾನಕ್ಕೆ ತರಲಾಗುತ್ತಿದೆ. ಸನ್ನಿಧಾನದಲ್ಲಿ ಅಯ್ಯಪ್ಪ ಸ್ವಾಮಿಯ ತಿರುವಾಭರಣಂವನ್ನು ವಿಗ್ರಹಕ್ಕೆ ತೊಡಿಸಿ ದೀಪಾರಾಧನೆ ಹಾಗೂ ಪೂಜೆ, ಪುನಸ್ಕಾರ ಮತ್ತಿತರ ವೈಧಿಕ ಕ್ರಿಯೆಗಳು ನಡೆಯಲಿದೆ.

Related posts

Leave a Reply

Your email address will not be published. Required fields are marked *