Header Ads
Header Ads
Breaking News

ಶಬರಿಮಲೆ ಕ್ಷೇತ್ರಕ್ಕೆ ಮಹಿಳೆಯರ ಪ್ರವೇಶ ಆದೇಶ ಹಿಂಪಡೆಯಬೇಕು : ಬಿ.ಎಸ್. ಯಡಿಯೂರಪ್ಪ ಹೇಳಿಕೆ

ಶಬರಿಮಲೆ ಕ್ಷೇತ್ರಕ್ಕೆ ಮಹಿಳೆಯರಿಗೆ ಪ್ರವೇಶಕ್ಕೆ ಅನುಮತಿ ನೀಡಿದ ಸುಪ್ರೀಂ ಕೋರ್ಟ್‌ನ ಆದೇಶದ ವಿರುದ್ಧವಾಗಿ ಪ್ರತಿಭಟನೆಗಳು ನಡೆಯುತ್ತಾ ಇವೆ. ಮಹಿಳೆಯರಿಗೆ ನೀಡಿದ ಅನುಮತಿಯನ್ನು ಹಿಂಪಡೆಯಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆಗ್ರಹಿಸಿದರು.

ಅವರು ಕಾಸರಗೋಡಿನ ಮಧೂರಿನಲ್ಲಿ ಕೈಗೊಂಡ ಶಬರಿಮಲೆ ಸಂರಕ್ಷಣಾ ರಥಯಾತ್ರೆಯಲ್ಲಿ ಪಾಲ್ಗೊಳ್ಳಲು ಕೇರಳಕ್ಕೆ ಆಗಮಿಸುತ್ತಿದ್ದ ವೇಳೆ ಸರ್ಕ್ಯೂಟ್‌ನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಶಬರಿಮಲೆಗೆ ಕ್ಷೇತ್ರಕ್ಕೆ ಮಹಿಳೆಯರ ಪ್ರವೇಶವನ್ನು ಅಲ್ಲಿಯೇ ಮಹಿಳೆಯರೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ಹೋರಾಟಗಳು ನಡೆಯುತ್ತಿದೆ. ಸಾವಿರಾರು ವರುಷಗಳಿಂದ ನಡೆದುಕೊಂಡು ಬಂದ ಪದ್ದತಿ ಎಂದ ಅವರು, ಈ ಬಗ್ಗೆ ಕೇರಳ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Related posts

Leave a Reply